ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಳ್ಳಾರಿಯಲ್ಲಿ ಬೆಳ್ಳಂಬೆಳಗ್ಗೆ ಹರಿದ ನೆತ್ತರು, ವ್ಯಕ್ತಿಗೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹೊಸಪೇಟೆಯಲ್ಲಿ ನಡೆದಿದೆ. ಹೊಸಪೇಟೆ ನಿವಾಸಿ ರಾಮಲಿ (40) ಕೋಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ.
ವ್ಯಕ್ತಿಯನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಚಾಕುವಿನಿಂದ ಎದೆ, ಕುತ್ತಿಗೆ ಹಾಗೂ ಹೊಟ್ಟೆ ಭಾಗಕ್ಕೆ ಇರಿಯಲಾಗಿದೆ. ರಕ್ತದ ಮಾಡುವಲ್ಲಿ ಬಿದ್ದು ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಈ ಸಂಬಂಧ ಸ್ಥಳಕ್ಕೆ ಹೊಸಪೇಟೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.