ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಭಾರತದಲ್ಲಿ ಮಳೆಯಿಂದಾಗ ಸಾಕಷ್ಟು ಹಾನಿಯಾಗಿದ್ದು, ಈಗಾಗಲೇ 12 ಕ್ಕೂ ಹೆಚ್ಚು ಮಂದಿ ಮಹಾಮಳೆಗೆ ಬಲಿಯಾಗಿದ್ದಾರೆ.
ಹಿಮಾಚಲ ಪ್ರದೇಶದಲ್ಲಿಯೂ ಮಳೆ ಅಬ್ಬರಕ್ಕೆ ಈಗಾಗಲೇ 20 ಮಂದಿ ಮೃತಪಟ್ಟಿದ್ದು, ಇನ್ನೂ ಎರಡು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜಸ್ಥಾನ,ಪಂಜಾಬ್, ಹರಿಯಾಣ,ಉತ್ತರಾಖಂಡ ಹಾಗೂ ಜಮ್ಮು ಕಾಶ್ಮೀರದಲ್ಲಿ ಭಾರೀ ಮಳೆಯಾಗಲಿದ್ದು, ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ದೆಹಲಿಯಲ್ಲಿ ಮಳೆಯಿಂದಾಗಿ ವಾಹನ ಸವಾರರು ಪರದಾಡಿದ್ದಾರೆ. ಹಲವಾರು ಭಾಗಗಳಲ್ಲಿ ಮಳೆನೀರು ರಸ್ತೆಯಲ್ಲೇ ನಿಂತಿದ್ದು ಟ್ರಾಫಿಕ್ ಜಾಮ್ ಕೂಡ ಉಂಟಾಗಿದೆ.
ಉತ್ತರ ಪ್ರದೇಶದ ಮುಜಾಫರ್‌ನಗರದಲ್ಲಿ ಮಳೆಗೆ ಮನೆ ಕುಸಿದು, ತಾಯಿ ಮಗಳು ಮೃತಪಟ್ಟಿದ್ದಾರೆ, ನಿನ್ನೆಯಷ್ಟೇ ಜಮ್ಮುವಿನಲ್ಲಿ ಪ್ರವಾಹಕ್ಕೆ ಸಿಲುಕಿ ಇಬ್ಬರು ಸೇನಾ ಯೋಧರು ಕೊಚ್ಚಿ ಹೋಗಿದ್ದಾರೆ.
ಇನ್ನು ಅಮರನಾಥ ಯಾತ್ರೆಗೂ ಮಳೆ ಅಡ್ಡಿಯಾಗಿದ್ದು, ಇಂದು ಕೂಡ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಜಮ್ಮು-ಶ್ರೀನಗರ ಹೆದ್ದಾರಿಯಲ್ಲಿ ಭೂಕುಸಿತದಿಂದಾಗಿ ಮೂರು ಸಾವಿರಕ್ಕೂ ಹೆಚ್ಚು ವಾಹನಗಳು ಸಿಲುಕಿಹಾಕಿಕೊಂಡಿವೆ.