ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ಕರ್ನಾಟಕದ ಒಳನಾಡಿನಲ್ಲಿ ಮಳೆ ಆರಂಭವಾಗಿದೆ. ಅದರಲ್ಲೂ ಬೆಂಗಳೂರಿನಲ್ಲಿ ಇಂದುಬೆಳಗ್ಗೆಯಿಂದ ಭಾರೀ ಮಳೆ ಸುರಿಯುತ್ತಿದ್ದು, ರಸ್ತೆ-ಚರಂಡಿಗಳು ತುಂಬಿ ಹರಿಯುತ್ತಿವೆ.
ಮುಂದಿನ ಮೂರು ದಿನ ಬೆಂಗಳೂರಿನಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ನಾಳೆ(ಅಕ್ಟೋಬರ್ 16) ಬೆಂಗಳೂರಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ರಾಜಧಾನಿಯಲ್ಲಿ ವ್ಯಾಪಕ ಮಳೆ ಹಿನ್ನಲೆಯಲ್ಲಿ ಅಕ್ಟೋಬರ್ 16ರಂದು ಬೆಂಗಳೂರಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಜಗದೀಶ್ ಸೂಚಿಸಿದ್ದಾರೆ.