ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಶನಿವಾರ ಮಧ್ಯಾಹ್ನದಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಮಳೆಗಾಗಿ ಕಾದು ಕುಳಿತಿದ್ದ ಜನರ ಮುಖದಲ್ಲಿ ಸಂತೋಷ ತುಂಬಿದೆ. ಆದಾಗ್ಯೂ,ಮಳೆಯೊಂದಿಗೆ ಬಿಸುತ್ತಿರುವ ಬಿರುಗಾಳಿ ಮಲೆನಾಡು ಭಾಗದ ಜನರಲ್ಲಿ ಆತಂಕ ಮೂಡಿಸಿದೆ.
ಚಿಕ್ಕಮಗಳೂರು ಜಿಲ್ಲೆಯ ಮಲೆನಾಡಿನಲ್ಲಿ ಕಳೆದೊಂದು ವಾರದಿಂದ ಭಾರೀ ಮಳೆಯಾಗುತ್ತಿದೆ. ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಎನ್.ಆರ್.ಪುರ, ಜಯಪುರ, ಕೊಪ್ಪ, ಬಾಳೆಹೊನ್ನೂರುಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ಜನರು ಸಂತಸಗೊಂಡಿದ್ದಾರೆ.
ಕಳೆದ ವರ್ಷ ಮಲೆನಾಡಿನ ಪ್ರದೇಶಗಳಲ್ಲಿ ವಾಡಿಕೆ ಪ್ರಮಾಣದ ಮಳೆಯಾಗುವುದಿಲ್ಲ ಎಂಬ ಆತಂಕವಿತ್ತು. ಆದರೆ, ಕಳೆದೊಂದು ವಾರದಿಂದ ಮಲೆನಾಡಿನಲ್ಲಿ ಉತ್ತಮ ಮಳೆಯಾಗುತ್ತಿದ್ದು, ಮಲೆನಾಡಿನ ಜನತೆ ಸಂತಸಗೊಂಡಿದ್ದಾರೆ.