ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದ ಕಾಫಿ ಬೆಳೆಗಾರರು ಭಾರೀ ಮಳೆಯಿಂದ ರಾಜ್ಯದ ಹೃದಯಭಾಗದಲ್ಲಿರುವ ಕಾಫಿ ತೋಟಗಳಿಗೆ ಹಾನಿಯಾದ ನಂತರ 60 ಪ್ರತಿಶತದಷ್ಟು ಇಳುವರಿ ನಷ್ಟವನ್ನು ಅನುಭವಿಸಿದ್ದಾರೆ.
ಮಲೆನಾಡಿನ ಜಿಲ್ಲೆಗಳಾದ ಹಾಸನ, ಚಿಕ್ಕಮಗಳೂರಿನಲ್ಲಿ ಕಳೆದೊಂದು ತಿಂಗಳಿನಿಂದ ನಿರಂತರವಾಗಿ ಸುರಿಯುತ್ತಿರುವ ಮಳೆ ಹಾಗೂ ಶೀತ ವಾತಾವರಣ ಕಾಫಿ, ಕಾಳುಮೆಣಸು ಬೆಳೆಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ.
ಈ ವರ್ಷ ಬೇಸಿಗೆಯಲ್ಲಿ ವಿಪರೀತ ಉಷ್ಣಾಂಶ ದಾಖಲಾಗಿದ್ದು, ಕಾಫಿ ಬೆಳೆ ಹಾಳಾಗಿದೆ. ಪ್ರಸ್ತುತ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಕಾಫಿ ಬೆಳೆಗಾರರು ಶೇ.60 ರಷ್ಟು ಇಳುವರಿ ನಷ್ಟಕ್ಕೆ ಗುರಿಯಾಗಿದ್ದಾರೆ.