ಕೊಡಗಿನಲ್ಲಿ ಧಾರಾಕಾರ ಮಳೆ: ಅಲ್ಲಲ್ಲಿ ಅವಾಂತರ ಸೃಷ್ಟಿ

ಹೊಸದಿಗಂತ ವರದಿ, ಮಡಿಕೇರಿ:
ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಅವಾಂತರ ಸೃಷ್ಟಿಯಾಗಿದೆ. ಭಾಗಮಂಡಲ – ತಲಕಾವೇರಿ ರಸ್ತೆ ಮೇಲೆ ಬಂಡೆ ಉರುಳಿ ಬಿದ್ದಿದೆ.
ಭಾಗಮಂಡಲದಿಂದ 4 ಕಿ.ಮೀ ದೂರದಲ್ಲಿ ಈ ಘಟನೆ ನಡೆದಿದೆ.
ಮತ್ತೊಂದೆಡೆ ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ 2ನೇ ಮೊಣ್ಣಂಗೇರಿ ಬಳಿ ಬರೆ ಕುಸಿದು ಮಣ್ಣು ರಸ್ತೆಯ ಮೇಲೆ ಬಿದ್ದಿದ್ದು, ವಾಹನ ಸಂಚಾರಕ್ಕೆ ಅಡಚಣೆಯಾಗಿದೆ.
ಇನ್ನು 2ನೇ ಮೊಣ್ಣಂಗೇರಿ- ರಾಮಕೊಲ್ಲಿ ಸಂಪರ್ಕ ಕಲ್ಪಿಸುವ ಸೇತುವೆಯೂ ಬಿರುಕು ಬಿಟ್ಟಿದೆ.
ಗಾಳಿ ಮಳೆಗೆ ವಿದ್ಯುತ್ ಕಂಬಗಳು ಉರುಳಿ ಬಿದ್ದ ಹಿನ್ನೆಲೆಯಲ್ಲಿ ಜಿಲ್ಲಾ ಕೇಂದ್ರ ಮಡಿಕೇರಿ ಸೇರಿದಂತೆ ಜಿಲ್ಲೆಯ ಹಲವೆಡೆ ನಿನ್ನೆ ರಾತ್ರಿಯಿಂದಲೇ ವಿದ್ಯುತ್ ವ್ಯತ್ಯಯವಾಗಿದೆ.
ಮಡಿಕೇರಿ ನಗರದ ಚಾಮುಂಡೇಶ್ವರಿ ನಗರದಲ್ಲಿ ಬರೆ ಕುಸಿದು ಮೂರು ಮನೆಗಳಿಗೆ ಹಾನಿಯಾಗಿದೆ. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!