ಹೊಸದಿಗಂತ ಡಿಜಿಟಲ್ ಡೆಸ್ಕ್:
ತೋಷಾಖಾನ್ ಪ್ರಕರಣದಲ್ಲಿ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಇಸ್ಲಾಮಾಬಾದ್ ನ್ಯಾಯಾಲಯವು ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.
ತೋಷಾಖಾನ್ ಪ್ರಕರಣದಲ್ಲಿಇಮ್ರಾನ್ ಖಾನ್ ಅವರನ್ನು ದೋಷಿ ಎಂದು ಘೋಷಿಸಿ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿತ್ತು.
ಇದೀಗ ಇಸ್ಲಾಮಾಬಾದ್ ನ್ಯಾಯಾಲಯವು ಬೇಲ್ ನೀಡಿ ಆದೇಶ ಹೊರಡಿಸಿದೆ.
2018ರಿಂದ 2022ರ ಮಧ್ಯೆ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಸರ್ಕಾರದ ಉಡುಗೊರೆಯನ್ನ ಕಾನೂನು ಬಾಹಿರವಾಗಿ ಮಾರಾಟ ಮಾಡಿದ ಆರೋಪ ಹೊತ್ತಿದ್ದಾರೆ.
ತೋಷಾಖಾನ್ ಪ್ರಕರಣದಲ್ಲಿ ಪಾಕಿಸ್ತಾನದ ನ್ಯಾಯಾಲಯವು ಇಮ್ರಾನ್ ಖಾನ್ ಅವರನ್ನು ದೋಷಿ ಎಂದು ಘೋಷಿಸಿ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿತ್ತು. ಇಮ್ರಾನ್ ಖಾನ್ 5 ವರ್ಷ ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂದು ಆದೇಶಿಸಿತ್ತು.