ಟಾಸ್​ ಗೆದ್ದು ಬೌಲಿಂಗ್​ ಆಯ್ಕೆ ಮಾಡಿದ ದಕ್ಷಿಣ ಆಫ್ರಿಕಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉಭಯ ತಂಡಗಳಿಗೂ ಫೈನಲ್​ ಪಂದ್ಯವಾಗಿರುವ 5ನೇ ಟಿ-20 ಯಲ್ಲಿ ದಕ್ಷಿಣ ಆಫ್ರಿಕಾ ಟಾಸ್​ ಗೆದ್ದು ಬೌಲಿಂಗ್​ ಆಯ್ದುಕೊಂಡಿದೆ. ಗಾಯಗೊಂಡ ತೆಂಬ ಬವುಮಾ ಬದಲಾಗಿ ಈ ಪಂದ್ಯದಲ್ಲಿ ನಾಯಕತ್ವ ವಹಿಸಿಕೊಂಡಿರುವ ಸ್ಪಿನ್ನರ್​ ಕೇಶವ್​ ಮಹಾರಾಜ್​​ ಐದನೇ ಪಂದ್ಯದಲ್ಲೂ ಟಾಸ್​ ಗೆದ್ದು ಫೀಲ್ಡಿಂಗ್​ ಪಡೆದಿದ್ದಾರೆ .
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯ ಉಭಯ ತಂಡಗಳಿಗೆ ಫೈನಲ್ ಕದನವಾಗಿದೆ. 5 ಪಂದ್ಯಗಳ ಸರಣಿಯಲ್ಲಿ 2-2 ರಲ್ಲಿ ಸಮಬಲ ಸಾಧಿಸಿದ್ದು, ಇಲ್ಲಿ ಗೆಲ್ಲುವ ತಂಡ ಸರಣಿ ಜಯಿಸಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!