ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮಾರ್ಚ್ 2026ರ ವೇಳೆಗೆ ಎಡಪಂಥೀಯ-ಉಗ್ರವಾದವನ್ನು ಸಂಪೂರ್ಣ ನಿರ್ಮೂಲನೆ ಮಾಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೋಮವಾರ ಹೇಳಿದ್ದಾರೆ.
ಇಂದು ನಕ್ಸಲ್ ಪೀಡಿತ ರಾಜ್ಯಗಳ ಎಂಟು ಮುಖ್ಯಮಂತ್ರಿಗಳೊಂದಿಗೆ ನಡೆದ ಭದ್ರತೆ ಮತ್ತು ಅಭಿವೃದ್ಧಿ ಪರಿಶೀಲನಾ ಸಭೆ ಬಳಿಕ ಮಾತನಾಡಿದ ಅಮಿತ್ ಶಾ, ಅಭಿವೃದ್ಧಿಯು ನಕ್ಸಲ್ ಪೀಡಿತ ಪ್ರದೇಶಗಳಲ್ಲಿನ ಕೊನೆಯ ವ್ಯಕ್ತಿಯನ್ನು ತಲುಪಬೇಕಾದರೆ, ಎಡ ಸಿದ್ಧಾಂತ ಪ್ರೇರಿತ ಹಿಂಸಾಚಾರವನ್ನು ಸಂಪೂರ್ಣವಾಗಿ ಕೊನೆಗೊಳಿಸಬೇಕು ಎಂದರು.
LWE ವಿರುದ್ಧ ಹೋರಾಡಲು, ನಕ್ಸಲ್ ಪೀಡಿತ ಪ್ರದೇಶಗಳಲ್ಲೂ ಕಾನೂನನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸಬೇಕು. ಕಳೆದ 30 ವರ್ಷಗಳಲ್ಲಿ ಮೊದಲ ಬಾರಿಗೆ, ಎಡ ಸಿದ್ಧಾಂತ ಬೆಂಬಲಿತ ಉಗ್ರವಾದದಿಂದಾಗಿ ಮೃತಪಟ್ಟವರ ಸಂಖ್ಯೆ 100ಕ್ಕಿಂತ ಕಡಿಮೆಯಾಗಿದೆ ಎಂದು ಶಾ ಹೇಳಿದರು.
LWE ಹಿಂಸಾಚಾರದ ವಿರುದ್ಧದ ಹೋರಾಟವು ಈಗ ಅಂತಿಮ ಹಂತದಲ್ಲಿದೆ. ಮಾರ್ಚ್ 2026 ರ ವೇಳೆಗೆ, ದೇಶವು ದಶಕಗಳ ಈ ಹಳೆಯ ಸಮಸ್ಯೆಯಿಂದ ಸ್ವಾತಂತ್ರ್ಯವನ್ನು ಪಡೆಯುತ್ತದೆ ಎಂದು ಹೇಳಿದರು.