Friday, August 19, 2022

Latest Posts

ತೌಕ್ತೆ ಚಂಡಮಾರುತ: ಹಾನಿ ಪ್ರದೇಶಕ್ಕೆ ಶಾಸಕಿ ರೂಪಾಲಿ ಭೇಟಿ, ಪರಿಶೀಲನೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………….

ಹೊಸ ದಿಗಂತ ವರದಿ, ಅಂಕೋಲಾ :

ತೌಕ್ತೆ ಚಂಡಮಾರುತದಿಂದ ಹಾನಿಗೊಳಗಾದ ಹಾರವಾಡಾ, ಗಾಬೀತಕೇಣಿ ಮತ್ತಿತರ ಪ್ರದೇಶಕ್ಕೆ ಶಾಸಕಿ ರೂಪಾಲಿ ನಾಯ್ಕ ಸೋಮವಾರ ಸಂಜೆ ಭೇಟಿ ನೀಡಿ ಹಾನಿಯ ಪರಿಶೀಲನೆ ನಡೆಸಿದರಲ್ಲದೇ ಸಂತ್ರಸ್ತ ಜನತೆಗೆ ನೆರವಿನ ಭರವಸೆ ನೀಡಿದರು.
ಹಾರವಾಡಾ ಮತ್ತು ಗಾಬೀತಕೇಣಿ ಪ್ರದೇಶದಲ್ಲಿ ಕಡಲಕೊರೆತದಿಂದ ಆಗಿರುವ ಹಾನಿಯನ್ನು ಪರಿಶೀಲಿಸಿದರು. ಅಲೆಗಳ ಅಬ್ಬರಕ್ಕೆ ಮನೆಗಳಿಗೆ ನೀರು ನುಗ್ಗಿ ಆಗಿರುವ ಹಾನಿಯನ್ನು ವೀಕ್ಷಿಸಿದರಲ್ಲದೇ ಮನೆಹಾನಿಗೊಳಗಾದವರಿಗೆ ಪರಿಹಾರ ಚೆಕ್ ವಿತರಿಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಉದಯ ಕುಂಬಾರ, ತಾ.ಪಂ ಕಾರ್ಯನಿರ್ವಹಣಾಧಿಕಾರಿ ಪಿ.ವೈ. ಸಾವಂತ, ಸಿಪಿಐ ಕೃಷ್ಣಾನಂದ ನಾಯಕ ಮತ್ತಿತರ ಅಧಿಕಾರಿಗಳು ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!