Monday, December 29, 2025

ಕಾರ್ಗಲ್‌ ಬಳಿ ಪ್ರವಾಸಿಗರ ಬಸ್ ಪಲ್ಟಿ: 18 ಮಂದಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪ್ರವಾಸಿಗರ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಕಾರ್ಗಲ್‌ ಸಮೀಪದ ಆಡುಕಟ್ಟೆಯ ಜೋಗಿನ ಮಠದ ಬಳಿ ನಡೆದಿದೆ. ಅಪಘಾತದಲ್ಲಿ ಸುಮಾರು 18 ಮಂದಿ ಗಾಯಗೊಂಡಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ 45 ಜನ ಪ್ರವಾಸಿಗರ ತಂಡ, ಖಾಸಗಿ ಬಸ್‌ನಲ್ಲಿ ಪ್ರವಾಸಕ್ಕೆ ಆಗಮಿಸಿತ್ತು.

ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ, ವಡನಬೈಲ್ ಬಳೆ ಪದ್ಮಾವತಿ ಅಮ್ಮನವರ ದೇವಾಲಯಕ್ಕೆ ತೆರಳುತ್ತಿದ್ದರು. ಈ ವೇಳೆ ಬಸ್ ಬ್ರೇಕ್ ಫೇಲ್ ಆಗಿ ಪಲ್ಟಿಯಾಗಿದೆ ಎನ್ನಲಾಗುತ್ತಿದೆ. ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದೆ.

error: Content is protected !!