April 6, 2026
Monday, April 6, 2026
spot_img

ರಸ್ತೆ ಬದಿ ನಿಂತಿದ್ದ ಕಾರಿನ ಮೇಲೆ ಮಗುಚಿ ಬಿದ್ದ ಟೂರಿಸ್ಟ್ ಬಸ್: ಪ್ರಯಾಣಿಕರು ಗ್ರೇಟ್ ಎಸ್ಕೇಪ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಡಿಕೇರಿ ತಾಲೂಕಿನ ಮರಗೋಡು ಗ್ರಾಮದಲ್ಲಿ ಇಂದು ಮೈ ನಡುಗಿಸುವಂತಹ ಅಪಘಾತವೊಂದು ಸಂಭವಿಸಿದೆ.

ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಕಾರಿನ ಮೇಲೆ ಉರುಳಿ ಬಿದ್ದಿದೆ. ಈ ಭೀಕರ ಘಟನೆಯಲ್ಲಿ ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರು ಪವಾಡ ಸದೃಶ್ಯವಾಗಿ ಪ್ರಾಣಾಪಾಯದಿಂದ ಪಾರಾಗಿದ್ದು, ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿದೆ.

ಪ್ರವಾಸಿ ಬಸ್ ಚಾಲಕ ಸುದೀಪ್ ಎಂಬುವವರ ಅತಿವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯೇ ಈ ಅಪಘಾತಕ್ಕೆ ನೇರ ಕಾರಣ ಎಂದು ಹೇಳಲಾಗುತ್ತಿದೆ. ವೇಗವಾಗಿ ಬಂದ ಬಸ್ ಚಾಲಕನ ನಿಯಂತ್ರಣ ತಪ್ಪಿ, ಪಕ್ಕದಲ್ಲೇ ನಿಂತಿದ್ದ ಕಾರಿನ ಮೇಲೆ ಭಾರೀ ಸದ್ದಿನೊಂದಿಗೆ ಮಗುಚಿ ಬಿದ್ದಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಜ್ಜಲ್ಪಟ್ಟಿದ್ದರೂ, ಅದರೊಳಗಿದ್ದ ನಾಲ್ವರಿಗೆ ಕೇವಲ ಸಣ್ಣಪುಟ್ಟ ಗಾಯಗಳಾಗಿವೆ.

ವಿಷಯ ತಿಳಿಯುತ್ತಿದ್ದಂತೆಯೇ ಮಡಿಕೇರಿ ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಾಲಕ ಸುದೀಪ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳುವ ಸಾಧ್ಯತೆ ಇದೆ. ಸದ್ಯ ಸ್ಥಳೀಯರ ಸಹಕಾರದೊಂದಿಗೆ ವಾಹನಗಳನ್ನು ರಸ್ತೆಯಿಂದ ತೆರವುಗೊಳಿಸುವ ಕಾರ್ಯ ನಡೆದಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !