ಹೊಸದಿಗಂತ ವರದಿ, ಅಂಕೋಲಾ:
ತಾಲೂಕಿನ ಅಚವೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಚನಗಾರದ ವಿಭೂತಿ ಜಲಪಾತದಲ್ಲಿ ಪ್ರವಾಸಿಗನೊಬ್ಬ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ನಡೆದಿದೆ.
ತೆಲಂಗಾಣ ರಾಜ್ಯದ ಅಜಯ್(24) ಮೃತ ವ್ಯಕ್ತಿಯಾಗಿದ್ದು ತೆಲಂಗಾಣದಿಂದ ಪ್ರವಾಸಕ್ಕೆ ಬಂದಿದ್ದ 6 ಜನರ ತಂಡದಲ್ಲಿದ್ದ ಈತ ಜಲಪಾತದ ನೀರಿಗಿಳಿದ ಸಂದರ್ಭದಲ್ಲಿ ಕಾಲು ಜಾರಿ ಆಳ ನೀರಿಗೆ ಬಿದ್ದು ಮುಳುಗಿ ಮೇಲೆಳಲು ಸಾಧ್ಯವಾಗದೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಸ್ಥಳದಲ್ಲಿದ್ದ ಪ್ರವಾಸಿಗರು ರಕ್ಷಣೆಗೆ ಪ್ರಯತ್ನಿಸಿದರೂ ಯಾವುದೇ ಪ್ರಯೋಜನ ಆಗದ ಕಾರಣ ಅಂಕೋಲಾ ಅಗ್ನಿಶಾಮಕ ಕೇಂದ್ರಕ್ಕೆ ಮಾಹಿತಿ ನೀಡಲಾಗಿತ್ತು.
ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳೀಯ ಜನರ ಸಹಕಾರದಲ್ಲಿ ನೀರಿನಲ್ಲಿ ಶೋಧ ಕಾರ್ಯ ನಡೆಸಿ ಮೃತದೇಹ ಮೇಲೆತ್ತಿದರು.
ಅಂಕೋಲಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.



