ಕಂದಕಕ್ಕೆ ಬಿದ್ದ ಪ್ರವಾಸಿ ವಾಹನ: ಕೇರಳಕ್ಕೆ ಟ್ರಿಪ್ ಬಂದಿದ್ದ ಮೂವರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಮಿಳುನಾಡಿನಿಂದ ಬಂದಿದ್ದ ಪ್ರವಾಸಿ ವಾಹನವೊಂದು ಕೇರಳದ ಆದಿಮಲಿ ಬಳಿ ಕಂದಕಕ್ಕೆ ಉರುಳಿ ಬಿದ್ದಿದೆ.

14 ಜನರಿದ್ದ ಟಿಟಿ ಕಂದಕಕ್ಕೆ ಉರುಳಿ ಬಿದ್ದಿದ್ದು, ಒಂದು ವರ್ಷದ ಮಗು ಸೇರಿ ಮೂವರು ಮೃತಪಟ್ಟಿದ್ದಾರೆ. 11 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ತಮಿಳುನಾಡಿನ ಥೇಣಿಯಿಂದ ಪ್ರವಾಸಿಗರು ಕೇರಳದ ಮಂಕುಲಂಗೆ ಭೇಟಿ ನೀಡಿ ವಾಪಾಸಾಗುವ ವೇಳೆ ಅಪಘಾತ ಸಂಭವಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!