ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿಕ್ಕಬಳ್ಳಾಪುರದ ಪ್ರಮುಖ ಪ್ರವಾಸಿ ತಾಣ ನಂದಿಬೆಟ್ಟಕ್ಕೆ ಇನ್ನು ಮುಂದೆ ಖಾಸಗಿ ವಾಹನದಲ್ಲಿ ತೆರಳುವಂತಿಲ್ಲ!
ಹೌದು, ವೈಯಕ್ತಿಕ ಹಾಗೂ ಖಾಸಗಿ ವಾಹನಗಳ ಪ್ರವೇಶವನ್ನು ರಾಜ್ಯ ಸರ್ಕಾರ ನಿಷೇಧಿಸಿದ್ದು, ಟ್ರಾಫಿಕ್ ಸಮಸ್ಯೆ ಎದುರಿಸುವ ಕ್ರಮ ಇದಾಗಿದೆ.
ವೀಕೆಂಡ್‌ನಲ್ಲಿ ಸಾಕಷ್ಟು ಟ್ರಾಫಿಕ್ ಸಮಸ್ಯೆ ಎದುರಾಗಿ ಪ್ರವಾಸಿಗರು ಹೈರಾಣಾಗುತ್ತಿದ್ದು, ಖಾಸಗಿ ವಾಹನಗಳ ಬದಲಾಗಿ ಎಲೆಕ್ಟ್ರಿಕ್ ಬಸ್ ವ್ಯವಸ್ಥೆ ಮಾಡಲಾಗುತ್ತದೆ.
ಇನ್ನು ಕೇಬಲ್ ಕಾರುಗಳು ಸದ್ಯದಲ್ಲೇ ಆರಂಭವಾಗಲಿದ್ದು, ಕೇಬಲ್ ಕಾರು ಹಾಗೂ ಎಲೆಕ್ಟ್ರಿಕ್ ಬಸ್ ಬಳಸಿ ನಂದಿಬೆಟ್ಟಕ್ಕೆ ತೆರಳಬಹುದಾಗಿದೆ.