May 12, 2026
Tuesday, May 12, 2026
spot_img

ಪ್ರವಾಸಿಗರೇ ಗಮನಿಸಿ: ಇನ್ಮುಂದೆ ವನ್ಯಜೀವಿಗಳು ಸಂಚರಿಸುವ ಚಾರಣಪಥಗಳಲ್ಲಿ ನೋ ಎಂಟ್ರಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಚಾಮರಾಜನಗರ ಜಿಲ್ಲೆಯ ನಾಗಮಲೆ ಅರಣ್ಯ ಪ್ರದೇಶದಲ್ಲಿ ಚಿರತೆ ದಾಳಿಗೆ ಬಾಲಕ ಬಲಿಯಾಗಿದ್ದ ಘಟನೆ ರಾಜ್ಯದಲ್ಲಿ ಆತಂಕ ಸೃಷ್ಟಿಸಿದ್ದು, ಈ ಬೆನ್ನಲ್ಲೇ ಪ್ರವಾಸಿಗರ ಜೀವ ರಕ್ಷಣೆ ಮತ್ತು ಇಂತಹ ಆಘಾತಕಾರಿ ಘಟನೆಗಳು ಮರುಕಳಿಸದಂತೆ ತಡೆಯಲು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಮುಂದಾಗಿದ್ದಾರೆ.

ಈ ನಿಟ್ಟಿನಲ್ಲಿ ಇನ್ಮುಂದೆ ರಾಜ್ಯದಲ್ಲಿ ವನ್ಯಜೀವಿಗಳ ಓಡಾಟವಿರುವ ಎಲ್ಲ ಚಾರಣಪಥಗಳಲ್ಲಿನ ಜನರ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಸೂಚನೆ ನೀಡಿದ್ದಾರೆ.

ಈ ಕುರಿತು ಆದೇಶ ಹೊರಡಿಸಿದ ಅರಣ್ಯ ಇಲಾಖೆ, ಚಾರಣಿಗರ ಮತ್ತು ಪ್ರವಾಸಿಗರ ಸುರಕ್ಷತೆ ನಮಗೆ ಮೊದಲ ಆದ್ಯತೆ. ನಾಗಮಲೆ ಅರಣ್ಯ ಪ್ರದೇಶದ ಎಂ. ಎಂ. ಹಿಲ್ಸ್ ವನ್ಯಜೀವಿ ವಿಭಾಗದಲ್ಲಿ ಚಿರತೆ ದಾಳಿಯಿಂದ ಬಾಲಕ ಮೃತಪಟ್ಟಿರುವ ಘಟನೆ ಆತಂಕ ಸೃಷ್ಟಿಸಿದೆ. ಈ ಹಿನ್ನೆಲೆ ಪ್ರವಾಸಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಚಿರತೆ, ಹುಲಿ, ಆನೆ, ಕರಡಿ ಹಾಗೂ ಇತರೆ ವನ್ಯಪ್ರಾಣಿಗಳು ಸಂಚರಿಸುವ ಹಾಗೂ ಸದರಿ ಪ್ರದೇಶಗಳಲ್ಲಿ ಮಾನವ-ವನ್ಯಜೀವಿ ಸಂಘರ್ಷ ಸಂಭವವಿರುವ ಎಲ್ಲಾ ಸಂಚಾರ ಪಥಗಳನ್ನು ತಕ್ಷಣದಿಂದಲೇ ಸ್ಥಗಿತಗೊಳಿಸಲಾಗಿದೆ. ಮುಂದಿನ ಆದೇಶದವರೆಗೆ ಈ ಸೂಚನೆ ಜಾರಿಯಲ್ಲಿರಲಿದೆ ಎಂದು ತಿಳಿಸಿದೆ .

ಇದೇ ವೇಳೆ ಚಾರಣಕ್ಕೆ ಹೊಸ ಎಸ್​ಒಪಿ ಪಾಲಿಸುವುದು ಕಡ್ಡಾಯವಾಗಲಿದ್ದು, ನಿಯಮ ಪಾಲನೆಗೆ ವ್ಯವಸ್ಥೆ ಮಾಡಿಕೊಂಡ ಬಳಿಕ ಚಾರಣಕ್ಕೆ ಅವಕಾಶ ನೀಡಲಾಗುವುದು ಎಂದು ಮುಖ್ಯ ವನ್ಯಜೀವಿ ಪರಿಪಾಲಕರು ಪ್ರತ್ಯೇಕ ಸುತ್ತೋಲೆ ಹೊರಡಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !