TOURISM| ಕ್ರಿಸ್‌ಮಸ್‌, ಹೊಸ ವರ್ಷಾಚರಣೆಗೆ ಶಿಮ್ಲಾದತ್ತ ಮುಖ ಮಾಡಿದ ಪ್ರವಾಸಿಗರು: ಸ್ಥಳೀಯರಿಗೆ ಢವಢವ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕ್ರಿಸ್‌ಮಸ್ ಮತ್ತು ಹೊಸ ವರ್ಷದ ಹಬ್ಬದ ಸೀಸನ್‌ಗಾಗಿ ಪ್ರವಾಸಿಗರು ಶಿಮ್ಲಾದತ್ತ ಮುಖ ಮಾಡಿದ್ದಾರೆ. ಕೆಲವು ದೇಶಗಳಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಮಧ್ಯೆ, ಪ್ರವಾಸಿಗರು COVID-ಸೂಕ್ತ ನಡವಳಿಕೆಯನ್ನು ಅನುಸರಿಸುತ್ತಾ ತಮ್ಮಗಿಷ್ಟವಾದ ಪ್ರದೇಶಗಳನ್ನು ಒಂದು ಸುತ್ತು ಹಾಕಲು ಬಯಸಿದ್ದಾರೆ.

ಕ್ರಿಸ್‌ಮಸ್ ಹಬ್ಬ ಮತ್ತು ಹೊಸ ವರ್ಷವನ್ನು ಆನಂದಿಸಲು ಇಲ್ಲಿ ಪ್ರವಾಸಿಗರು ಸೇರುತ್ತಾರೆ. ಆದರೆ ಕೊರೊನಾ ಕುರಿತು ಕೇಂದ್ರ ಸರ್ಕಾರ ನೀಡಿರುವ ಮಾಹತಿ ಮೇರೆಗೆ, ವಿವಿಧ ಭಾಗಗಳಿಂದ ಇಲ್ಲಿಗೆ ಆಗಮಿಸುವ ಪ್ರವಾಸಿಗರಿಂದ ಈ ಪ್ರದೇಶದ ಸ್ಥಳೀಯ ನಿವಾಸಿಗಳು ಚಿಂತಿತರಾಗಿದ್ದಾರೆ.

ತಮ್ಮ ಸುರಕ್ಷತೆಯನ್ನು ನೋಡಿಕೊಳ್ಳುವುದರ ಜೊತೆಗೆ ಸ್ಥಳೀಯ ನಿವಾಸಿಗಳ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕಾಗಿದೆ. ಪ್ರವಾಸಿಗರು COVID ಮಾನದಂಡಗಳನ್ನು ಅನುಸರಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಹಿಲ್‌ ರೆಸಾರ್ಟ್‌ಗಳತ್ತ ಮುಖ ಮಾಡುತ್ತಿರುವ ಜನ ಮುಖಗವಸು ಧರಿಸಿ, ಸೂಕ್ತ ಮಾನದಂಡಗಳನ್ನು ಅನುಸರಿಸುತ್ತಿದ್ದಾರೆ. ಶಾಪಿಂಗ್‌, ಜನಸಂದಣಿ ಸೇರುವ ಸ್ಥಳಗಳಲ್ಲಿ ಹೆಚ್ಚಿನ ಜಾಗರೂಕತೆ ಅವಶ್ಯಕತೆಯಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!