May 2, 2026
Saturday, May 2, 2026
spot_img

ಇಂದಿನಿಂದ ಬೆಂಗಳೂರಿನಲ್ಲಿ ಟೋಯಿಂಗ್‌ ಶುರು, ಎಲ್ಲೆಂದ್ರಲ್ಲಿ ಗಾಡಿ ನಿಲ್ಲಿಸಿ ಹೋಗ್ಬೇಡ್ರಪ್ಪೋ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಇಲ್ಲೇ ಐದು ನಿಮಿಷ ವಾಪಾಸ್‌ ಬರ್ತೀನಿ ಎಂದು ಎಲ್ಲೆಂದರಲ್ಲಿ ಗಾಡಿ ನಿಲ್ಲಿಸೋ ನಿಮ್ಮ ಸ್ನೇಹಿತರಿಗೆ ಈ ಸುದ್ದಿಯನ್ನು ಶೇರ್‌ ಮಾಡಿ. ಇಂದಿನಿಂದ ಬೆಂಗಳೂರಿನಲ್ಲಿ ಟೋಯಿಂಗ್‌ ಆರಂಭವಾಗಿದೆ. ಹೀಗಾಗಿ ಗಾಡಿ ಎಲ್ಲೆಂದರಲ್ಲಿ ಕಂಡುಬಂದರೆ ಪೊಲೀಸ್‌ ಸ್ಟೇಷನ್‌ಗೆ ಹೋಗಬೇಕಾಗುತ್ತದೆ.

ಈಗಾಗಲೇ ಟೋಯಿಂಗ್‌ಗಾಗಿ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಹಾಗೂ ಪೊಲೀಸ್‌ ಇಲಾಖೆ ಸಕಲ ತಯಾರಿ ಮಾಡಿಕೊಂಡಿದ್ದು, ಜಂಟಿಯಾಗಿ ಕಾರ್ಯಾಚರಣೆಗೆ ಇಳಿದಿದೆ.

ಸಾರ್ವಜನಿಕರ ತೀವ್ರ ಆಕ್ರೋಶ, ಟೋಯಿಂಗ್ ಸಿಬ್ಬಂದಿ ವರ್ತನೆಯಿಂದ ಬೇಸತ್ತು ಟೋಯಿಂಗ್ ವ್ಯವಸ್ಥೆಯನ್ನು ನಿಲ್ಲಿಸಲಾಗಿತ್ತು. ಟೋಯಿಂಗ್ ಇಲ್ಲದ ಕಾರಣ ವಾಹನ ಸವಾರರು ಎಲ್ಲೆಂದರಲ್ಲಿ ವಾಹನಗಳನ್ನು ಪಾರ್ಕ್ ಮಾಡೋದು, ಅಡ್ಡಾದಿಡ್ಡಿ ನಿಲ್ಲಿಸಿ ಹೋಗೋದು, ಹಳೆಯ ವಾಹನಗಳನ್ನು ಪಾರ್ಕ್ ಮಾಡಿ, ತಿಂಗಳಗಟ್ಟಲೇ ರಸ್ತೆಯಲ್ಲೇ ಬಿಡ್ತಿದ್ದ ಕಾರಣದಿಂದಾಗಿ ನಗರದಲ್ಲಿ ಇತ್ತೀಚಿಗೆ ಟ್ರಾಫಿಕ್ ಜಾಸ್ತಿಯಾಗಿದೆ.

ಇದರ ಬಗ್ಗೆ ದೂರುಗಳು ಬಂದ ಹಿನ್ನೆಲೆ ಕೆಲ ದಿನಗಳ ಹಿಂದಷ್ಟೆ ಡಿಸಿಎಂ ಡಿಕೆ ಶಿವಕುಮಾರ್ ನಗರದಲ್ಲಿ ಮತ್ತೆ ಟೋಯಿಂಗ್ ಆರಂಭಿಸೋ ಬಗ್ಗೆ ಹೇಳಿಕೆ ನೀಡಿದ್ರು. ಈ ಹೇಳಿಕೆ ಬೆನ್ನಲ್ಲೆ ಅಲರ್ಟ್ ಆಗಿದ್ದ ಪೊಲೀಸ್ ಇಲಾಖೆ, ಟೋಯಿಂಗ್ ಮಾಡೋಕೆ ಬೇಕಾದ ಎಲ್ಲಾ ಸಿದ್ದತೆಗಳನ್ನು ಮಾಡಿಕೊಂಡಿದೆ.

ಹೀಗಾಗಿ ಎಲ್ಲರೂ ತಮ್ಮ ಗಾಡಿಗಳನ್ನು ಎಲ್ಲಿ ಪಾರ್ಕ್‌ ಮಾಡ್ತಿದ್ದೀರಿ, ರಸ್ತೆಯ ರೂಲ್ಸ್‌ ಫಾಲೋ ಮಾಡ್ತಿದ್ದೀರಾ ಎನ್ನುವ ಬಗ್ಗೆ ಗಮನ ಇಡಿ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !