Thursday, June 30, 2022

Latest Posts

ಬೆಂಗಳೂರಿನಲ್ಲಿ ಟೋಯಿಂಗ್ ತಾತ್ಕಾಲಿಕ ಸ್ಥಗಿತ: 15 ದಿನದಲ್ಲಿ ಹೊಸ ವ್ಯವಸ್ಥೆ ಜಾರಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜಧಾನಿ ಬೆಂಗಳೂರಿನಲ್ಲಿ ಟೋಯಿಂಗ್ ತಾತ್ಕಾಲಿಕವಾಗಿ ನಿಲ್ಲಿಸಲಾಗಿದ್ದು , ಹೊಸ ವ್ಯವಸ್ಥೆ 15 ದಿನಗಳಲ್ಲಿ ಜಾರಿಯಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ವಾಹನಗಳ ಟೋಯಿಂಗ್ ಮೇಲೆ ಹೊಸ ಸರಳೀಕೃತ ಕ್ರಮಗಳನ್ನು ಜಾರಿಗೆ ತರುತ್ತೇವೆ. ಅಲ್ಲಿಯವರೆಗೂ ಟೋಯಿಂಗ್ ನಿಲ್ಲಿಸಲಾಗುವುದು. ಸಿಎಂ ಬೊಮ್ಮಾಯಿ ಅವರ ಜೊತೆ ಚರ್ಚಿಸಿ 15 ದಿನಗಳಲ್ಲಿ ಹೊಸ ಕ್ರಮ ತರಲಾಗುವುದು ಎಂದಿದ್ದಾರೆ.

ಇತ್ತೀಚೆಗೆ ಟೋಯಿಂಗ್ ಬಗ್ಗೆ ಭಾರೀ ಚರ್ಚೆ ಆಗುತ್ತಿದ್ದು, ಪೊಲೀಸ್ ಇಲಾಖೆಯಿಂದ ವಿಪರೀತ ತೊಂದರೆಯಾಗುತ್ತಿದೆ ಎಂದು ಸಾರ್ವಜನಿಕರು ದೂರಿದ್ದರು. ನಿನ್ನೆ ಈ ಬಗ್ಗೆ ಗೃಹ ಸಚಿವರು ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಸರಳ ಕ್ರಮಗಳಿಗೆ ಮುಂದಾಗಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss