September 23, 2026
Wednesday, September 23, 2026
spot_img

ಬೆಂಗಳೂರಿನ ಮೆಟ್ರೋದಲ್ಲೂ ‘Toxic’ ಹವಾ: ಪ್ರಚಾರ ಅಂದ್ರೆ ಹಿಂಗಿರ್ಬೇಕು! ಏನಂತೀರಾ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘Toxic’ ಸಿನಿಮಾ ಬಿಡುಗಡೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಚಿತ್ರತಂಡ ವಿಭಿನ್ನ ರೀತಿಯಲ್ಲಿ ಪ್ರಚಾರ ನಡೆಸುತ್ತಿದೆ. ಇದೀಗ ಬೆಂಗಳೂರಿನ ನಮ್ಮ ಮೆಟ್ರೋ ರೈಲುಗಳನ್ನೇ ‘Toxic’ ಚಿತ್ರದ ಪೋಸ್ಟರ್‌ಗಳಿಂದ ಅಲಂಕರಿಸುವ ಮೂಲಕ ಸಿನಿಪ್ರಿಯರ ಗಮನ ಸೆಳೆದಿದೆ.

ಮೆಟ್ರೋ ರೈಲಿನ ಮೇಲೆ ಯಶ್ ಲುಕ್

‘Toxic’ ಚಿತ್ರದ ಪ್ರಚಾರಕ್ಕಾಗಿ ಮೆಟ್ರೋದ ಕೆಲವು ಕೋಚ್‌ಗಳನ್ನು ಚಿತ್ರದ ಪೋಸ್ಟರ್‌ಗಳಿಂದ ಸಂಪೂರ್ಣವಾಗಿ ವಿನ್ಯಾಸಗೊಳಿಸಲಾಗಿದೆ. ಪೋಸ್ಟರ್‌ಗಳಲ್ಲಿ ಯಶ್ ಅವರ ಸ್ಟೈಲಿಶ್ ಹಾಗೂ ಗಂಭೀರ ಲುಕ್ ಕಾಣಿಸಿಕೊಂಡಿದ್ದು, ಕೈಯಲ್ಲಿ ಗನ್ ಹಿಡಿದಿರುವ ಅವರ ಪಾತ್ರದ ಚಿತ್ರಣ ಅಭಿಮಾನಿಗಳ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್

ಬೆಂಗಳೂರಿನ ವಿವಿಧ ಮಾರ್ಗಗಳಲ್ಲಿ ಸಂಚರಿಸುತ್ತಿರುವ ‘Toxic’ ಮೆಟ್ರೋ ರೈಲುಗಳ ಫೋಟೋ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಮೆಟ್ರೋದಲ್ಲಿ ಪ್ರಯಾಣಿಸುವ ಸಾವಿರಾರು ಜನರಿಗೆ ಚಿತ್ರದ ಪ್ರಚಾರ ನೇರವಾಗಿ ತಲುಪುತ್ತಿದ್ದು, ಯಶ್ ಅಭಿಮಾನಿಗಳಲ್ಲೂ ಸಂಭ್ರಮ ಮೂಡಿಸಿದೆ.

ಪ್ಯಾನ್ ಇಂಡಿಯಾ ಮಟ್ಟದಲ್ಲಿ ಪ್ರಚಾರ

‘KGF’ ಸರಣಿಯ ಮೂಲಕ ಕನ್ನಡ ಚಿತ್ರರಂಗಕ್ಕೆ ಜಾಗತಿಕ ಮಟ್ಟದಲ್ಲಿ ಗುರುತಿನ ಚಾಪು ಮೂಡಿಸಿರುವ ಯಶ್, ಇದೀಗ ‘Toxic’ ಮೂಲಕ ಮತ್ತೊಮ್ಮೆ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟಿಸಿದ್ದಾರೆ. ಕನ್ನಡ ಮಾತ್ರವಲ್ಲದೆ ದೇಶದ ವಿವಿಧ ಭಾಗಗಳು ಹಾಗೂ ವಿದೇಶಗಳಲ್ಲೂ ಚಿತ್ರಕ್ಕೆ ಪ್ರಚಾರ ನೀಡಲಾಗುತ್ತಿದೆ. ಹೀಗಾಗಿ ‘Toxic’ ಚಿತ್ರವನ್ನು ಪ್ಯಾನ್ ಇಂಡಿಯಾ ಮತ್ತು ಅಂತಾರಾಷ್ಟ್ರೀಯ ಪ್ರೇಕ್ಷಕರನ್ನು ಗಮನದಲ್ಲಿಟ್ಟುಕೊಂಡು ಬಿಡುಗಡೆ ಮಾಡಲು ಚಿತ್ರತಂಡ ಸಜ್ಜಾಗಿದೆ.

ಆಗಸ್ಟ್ 26ಕ್ಕೆ ‘Toxic’ ಬಿಡುಗಡೆ

‘Toxic’ ಸಿನಿಮಾ ಆರಂಭದಲ್ಲಿ ಮಾರ್ಚ್‌ನಲ್ಲಿ ಬಿಡುಗಡೆಯಾಗಬೇಕಿತ್ತು. ಆದರೆ ಕೆಲವು ಕಾರಣಗಳಿಂದ ಬಿಡುಗಡೆಯನ್ನು ಮುಂದೂಡಲಾಗಿತ್ತು. ಇದೀಗ ಚಿತ್ರವು ಆಗಸ್ಟ್ 26ರಂದು ವಿಶ್ವಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಘೋಷಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !