ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಕಿಂಗ್ ಸ್ಟಾರ್ ಯಶ್ ‘ಟಾಕ್ಸಿಕ್’ ಸಿನಿಮಾದ ಶೂಟಿಂಗ್‌ನಲ್ಲಿ ತೊಡಗಿಸಿಕೊಂಡಿದ್ದಾರೆ. ಮುಂಬೈ, ಗೋವಾದಲ್ಲಿ ಚಿತ್ರೀಕರಣ ನಡೆಸಿದ ಬಳಿಕ ಮತ್ತೆ ಬೆಂಗಳೂರಿನಲ್ಲಿ ಚಿತ್ರೀಕರಣ ಭರದಿಂದ ನಡೆಯುತ್ತಿದೆ.
ಮಲಯಾಳಂ ನಿರ್ದೇಶಕಿ ಗೀತು ಮೋಹನ್‌ದಾಸ್ ಅವರು ಆ್ಯಕ್ಷನ್ ಕಟ್ ಹೇಳ್ತಿದ್ದಾರೆ.
ಸದ್ಯ ಬೆಂಗಳೂರಿನ ಹೆಚ್‌ಎಂಟಿ ಫ್ಯಾಕ್ಟರಿಯಲ್ಲಿ ನಡೆಯುತ್ತಿರುವ ಚಿತ್ರೀಕರಣಕ್ಕೆ ನಯನತಾರಾ, ಕಿಯಾರಾ, ತಾರಾ ಸುತಾರಿಯಾ, ಹುಮಾ ಖುರೇಶಿ ಭಾಗಿಯಾಗಿದ್ದಾರೆ ಎನ್ನಲಾಗಿದೆ.
ಈ ಕುರಿತು ಚಿತ್ರತಂಡ ಅಧಿಕೃತ ಮಾಹಿತಿ ನೀಡ್ತಾರಾ? ಕಾದುನೋಡಬೇಕಿದೆ.