ಟೊಯೊಟೊ ಕಿರ್ಲೋಸ್ಕರ್ ಮೋಟಾರ್ಸ್ ಉಪಾಧ್ಯಕ್ಷ ವಿಕ್ರಮ್ ಕಿರ್ಲೋಸ್ಕರ್ ನಿಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಟೊಯೊಟೊ ಕಿರ್ಲೋಸ್ಕರ್ ಮೋಟಾರ್ಸ್ ಉಪಾಧ್ಯಕ್ಷ ವಿಕ್ರಮ್ ಕಿರ್ಲೋಸ್ಕರ್ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಹೆಬ್ಬಾಳದ ಚಿತಾಗಾರದಲ್ಲಿ ಇಂದು ಅಂತ್ಯಕ್ರಿಯೆ ನೆರವೇರಲಿದೆ. ಹೃದಯಾಘಾತದಿಂದ ವಿಕ್ರಮ್ ಅವರು ಇದ್ದಕ್ಕಿದ್ದಂತೆಯೇ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಈ ಬಗ್ಗೆ ಟೊಟೊಯೊ ಇಂಡಿಯಾ ಸಂತಾಪ ವ್ಯಕ್ತಪಡಿಸಿದ್ದು, ಈ ವಿಷಯ ತಿಳಿಸಲು ನಮಗೆ ನೋವಾಗುತ್ತಿದೆ. ಅವರ ಆತ್ಮಕ್ಕೆ ಶಾಂತಿ ಕೋರುತ್ತೇವೆ, ಅವರ ಕುಟುಂಬ ಹಾಗೂ ಸ್ನೇಹಿತರಿಗೆ ಸಾಂತ್ವಾನ ಹೇಳುತ್ತೇವೆ ಎಂದು ಹೇಳಿದೆ.

ಕಿರ್ಲೋಸ್ಕರ್ ಗ್ರೂಪ್‌ನ ನಾಲ್ಕನೇ ತಲೆಮಾರಿನ ಮುಖ್ಯಸ್ಥರಾದ ವಿಕ್ರಮ್ ಅವರು ಸಿಸ್ಟಮ್ಸ್ ಲಿಮಿಟೆಡ್‌ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಟೊಯೊಟೊ ಕಿರ್ಲೋಸ್ಕರ್ ಮೋಟಾರ್ ಪ್ರೈವೇಟ್‌ನ ಉಪಾಧ್ಯಕ್ಷರೂ ಆಗಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!