ಅನಾರೋಗ್ಯಕ್ಕೀಡಾದ ಮಕ್ಕಳ ಮೇಲೆ ನಿಗಾ ಇರಲಿ, ರಾಜ್ಯಗಳಿಗೆ ಕೇಂದ್ರ ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಚೀನಾದ ಮಕ್ಕಳಲ್ಲಿ ತೀವ್ರವಾದ ಜ್ವರ ಮತ್ತು ನ್ಯುಮೋನಿಯಾದ ಬಗ್ಗೆ ಭಾರತ ಸರ್ಕಾರವೂ ಎಚ್ಚೆತ್ತುಕೊಂಡಿದೆ. ಮಕ್ಕಳಲ್ಲಿ ಉಸಿರಾಟ ಸಂಬಂಧಿ ಸಮಸ್ಯೆಗಳಿದ್ದರೆ ಕೂಡಲೇ ಇವುಗಳ ಬಗ್ಗೆ ಮಾಹಿತಿ ನೀಡುವಂತೆ ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಗೆ ಸೂಚಿಸಿದೆ. ಇನ್ಫ್ಲುಯೆಂಜಾ ವೈರಸ್ ಮತ್ತು ಉಸಿರಾಟದ ತೊಂದರೆಯಂತಹ ರೋಗಗಳ ಪ್ರಕರಣಗಳನ್ನು ಜಿಲ್ಲಾ ಮಟ್ಟದಲ್ಲಿ ವರದಿ ತಯಾರಿಸಿ,  ಕೇಂದ್ರಕ್ಕೆ ಸಂಪೂರ್ಣ ಮಾಹಿತಿ ಸಲ್ಲಿಸುವಂತೆ ಹೇಳಿದೆ.

ಕಾಯಿಲೆಗೆ ತುತ್ತಾಗಿರುವ ಮಕ್ಕಳ ರಕ್ತದ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳಿಸಿ ರೋಗ ಸಾಮಾನ್ಯವಾಗಿದೆಯೇ ಅಥವಾ ಹೊಸ ವೈರಸ್ ಹರಡುತ್ತಿದೆಯೇ ಎಂದು ತಿಳಿಯುವಂತೆ ಸೂಚಿಸಿದೆ. ಭಾರತದಲ್ಲಿ ಇಂತಹ ಕಾಯಿಲೆ ಬಗ್ಗೆ ಬೆದರಿಕೆ ಇದೆ ಎಂಬುದು ಇಲ್ಲಿಯವರೆಗೆ ಸ್ಪಷ್ಟವಾಗಿಲ್ಲ. ಆದರೆ, ಯಾವುದೇ ರೀತಿಯ ರಿಸ್ಕ್‌ ತೆಗೆದುಕೊಳ್ಳಲು ಸರಕಾರ ತಯಾರಿಲ್ಲ. ಹಾಗಾಗಿಯೇ ಮುಂಜಾಗ್ರತಾ ಕ್ರಮವಾಗಿ ಮಕ್ಕಳ ಮೇಲೆ ನಿಗಾ ಇಡುವಂತೆ ತಿಳಿಸಿದೆ.

ಸಾಮಾನ್ಯವಾಗಿ ಚಳಿಗಾಲದಲ್ಲಿ ನೆಗಡಿ ಮತ್ತು ಕೆಮ್ಮಿನಿಂದ ಬಳಲುತ್ತಿರುತ್ತಾರೆ. ಈ ಸಮಸ್ಯೆಗಳು ತೀವ್ರವಾದಾಗ, ಕೆಲವರು ಉಸಿರಾಟದಲ್ಲಿ ಸ್ವಲ್ಪ ತೊಂದರೆ ಅನುಭವಿಸುತ್ತಾರೆ. ಆದರೂ, ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಕೊರೊನಾ ಸಮಯದಲ್ಲಿ ನಿಗದಿಪಡಿಸಿದ ಮಾರ್ಗಸೂಚಿಗಳನ್ನು ಅನುಸರಿಸಬೇಕೆಂದು ಆರೋಗ್ಯ ಸಚಿವಾಲಯ ಮನವಿ ಮಾಡಿದೆ.

ಅಕ್ಟೋಬರ್ 2023ರ ಮಧ್ಯದಿಂದ, ಚೀನಾದಲ್ಲಿ ಮಕ್ಕಳು ಮತ್ತು ಯುವಕರಲ್ಲಿ ಉಸಿರಾಟದ ಕಾಯಿಲೆಗಳ ಪ್ರಕರಣಗಳು ವರದಿಯಾಗುತ್ತಿರುವುದಕ್ಕೆ ವಿಶ್ವ ಆರೋಗ್ಯ ಸಂಸ್ಥೆ ಕಳವಳ ವ್ಯಕ್ತಪಡಿಸಿದೆ. ಈ ಪ್ರಕರಣಗಳಲ್ಲಿ ನಿರಂತರ ಹೆಚ್ಚಳವಿದ್ದು, ತೀವ್ರ ನಿಗಾ ಇಟ್ಟಿದೆ. ಈ ಕುರಿತು ಹೆಚ್ಚಿನ ಮಾಹಿತಿ ನೀಡುವಂತೆ ಚೀನಾಕ್ಕೆ ವಿಶ್ವಸಂಸ್ಥೆ ಸೂಚಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!