ಟ್ರ್ಯಾಕ್ಟರ್ ಹಾಗೂ ಮಿನಿ ಟ್ರಕ್ ಅಪಘಾತ: 11 ಮಂದಿ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಾಕಿಸ್ತಾನದ ಡೇರಾ ಇಸ್ಮಾಯಿಲ್ ಖಾನ್‌ನ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರ್ಯಾಕ್ಟರ್ ಹಾಗೂ ಮಿನಿ ಟ್ರಕ್ ನಡುವೆ ಅಪಘಾತ ಸಂಭವಿಸಿದ್ದು, 11 ಮಂದಿ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಎರಡೂ ವಾಹನ ನಜ್ಜುಗುಜ್ಜಾಗಿವೆ. ಟ್ರಾಕ್ಟರ್‌ನಲ್ಲಿದ್ದ ಪ್ರಯಾಣಿಕರು ಹೊರಗೆ ಬಿದ್ದಿದ್ದಾರೆ. ಘಟನೆಯಲ್ಲಿ 29 ಮಂದಿ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಟ್ರಕ್ ಚಾಲಕ ನಿಯಂತ್ರಣ ತಪ್ಪಿದ್ದು, ವೇಗವಾಗಿ ಬಂದು ಟ್ರ್ಯಾಕ್ಟರ್‌ಗೆ ಡಿಕ್ಕಿಯಾಗಿದೆ ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!