ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಕಾಸ್ಗಂಜ್ ನಲ್ಲಿ ಭೀಕರ ದುರಂತ ಸಂಭವಿಸಿದೆ. ಟ್ರ್ಯಾಕ್ಟರ್ ಕೆರೆಗೆ ಬಿದ್ದು ಟ್ರ್ಯಾಲಿಯಲ್ಲಿದ್ದ 15 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಉತ್ತರಪ್ರದೇಶದ ಕಾಸ್ಗಂಜ್ ಎಂಬಲ್ಲಿ ನಡೆದಿದೆ. ಟ್ರ್ಯಾಕ್ಟರ್ ಟ್ರ್ಯಾಲಿಯಲ್ಲಿ ಒಟ್ಟು 40 ಮಂದಿ ಇದ್ದರು ಎಂದು ಹೇಳಲಾಗಿದೆ.
ಸೇತುವೆಯ ಮೂಲಕ ಚಲಿಸುತ್ತಿದ್ದ ಟ್ರ್ಯಾಕ್ಟರ್ ಕೆರೆಗೆ ಬಿದ್ದಿದೆ. ಸ್ಥಳಕ್ಕಾಗಮಿಸಿದ ಸ್ಥಳೀಯರು ನೀರಿನಲ್ಲಿ ಮುಳುಗಿದ್ದವರನ್ನು ರಕ್ಷಿಸಲು ಯತ್ನಿಸಿದರಾದರೂ ಟ್ರ್ಯಾಕ್ಟರ್‌ನಲ್ಲಿ ಪ್ರಯಾಣಿಸುತ್ತಿದ್ದ 40 ಮಂದಿಯಲ್ಲಿ ಏಳು ಮಕ್ಕಳು ಸೇರಿದಂತೆ 15 ಮಂದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.