Monday, September 26, 2022

Latest Posts

ನದಿಗೆ ಬಿದ್ದ ಟ್ರ್ಯಾಕ್ಟರ್:‌ ಓರ್ವನ ಸಾವು, ಐದು ಮಂದಿ ನಾಪತ್ತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:
ಜನರನ್ನು ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರೊಂದು ನದಿಗೆ ಬಿದ್ದ ಪರಿಣಾಮ ಟ್ರ್ಯಾಕ್ಟರ್‌ನಲ್ಲಿ ಪ್ರಯಾಣಿಸುತ್ತಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು ಐವರು ನಾಪತ್ತೆಯಾದ ದುರ್ಘಟನೆ ಉತ್ತರಪ್ರದೇಶದ ಹರ್ದೋಯಿಯಲ್ಲಿ ನಡೆದಿದೆ.

ಮೂಲಗಳ ವರದಿಯ ಪ್ರಕಾರ 24 ಜನರು ಟ್ರ್ಯಾಕ್ಟರ್‌ ನಲ್ಲಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು ಟ್ರ್ಯಾಕ್ಟರ್ ಹರ್ದೋಯ್‌ ಪ್ರದೇಶದ ಗರ್ರಾ ನದಿಗೆ ಉರುಳಿದೆ.‌

“ಸ್ವೀಕರಿಸಿದ ಮಾಹಿತಿಯ ಪ್ರಕಾರ 20 ಜನರು ಟ್ರ್ಯಾಕ್ಟರ್-ಟ್ರಾಲಿಯೊಂದಿಗೆ ಗರ್ರಾ ನದಿಗೆ ಬಿದ್ದಿದ್ದಾರೆ ಎಂದು ವರದಿಯಾಗಿದೆ, ಅವರಲ್ಲಿ, 14 ಜನರು ಬದುಕುಳಿದಿದ್ದಾರೆ. ಮುಖೇಶ್‌ ಎಂಬಾತನೊಬ್ಬ ಸಾವನ್ನಪ್ಪಿದ್ದಾನೆ. ಕಾಣೆಯಾದ ಐವರಿಗಾಗಿ ಶೋಧ ನಡೆಸಲಾಗುತ್ತಿದೆ.” ಎಂದು ಹರ್ದೋಯ್‌ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ರಕ್ಷಣಾ ಕಾರ್ಯಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್), ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್), ಮತ್ತು ಪ್ರಾಂತೀಯ ಸಶಸ್ತ್ರ ಕಾನ್‌ಸ್ಟಾಬ್ಯುಲರಿ (ಪಿಎಸಿ) ಯಿಂದ ಪ್ರವಾಹ ಘಟಕದ ತಂಡಗಳನ್ನು ನಿಯೋಜಿಸಲಾಗಿದೆ. ಕಾರ್ಯಾಚರಣೆ ಮುಂದುವರೆದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!