October 17, 2026
Saturday, October 17, 2026
spot_img

ಟ್ರ‍್ಯಾಕ್ಟರ್‌ಗೆ ಹಿಂಬದಿಯಿಂದ ಲಾರಿ ಡಿಕ್ಕಿ : ಸ್ಥಳದಲ್ಲೇ ಪ್ರಾಣಬಿಟ್ಟ ತಂದೆ,ಮಗಳು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಬಂದ ಲಾರಿಯೊಂದು ಡಿಕ್ಕಿ ಹೊಡೆದಿದ್ದು, ಟ್ರ್ಯಾಕ್ಟರ್‌ನಲ್ಲಿದ್ದ ತಂದೆ ಮಗಳು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ನಿಡಗುಂದಿ ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಮುದ್ದೇಬಿಹಾಳ ಕ್ರಾಸ್‌ ಬಳಿ ಘಟನೆ ಸಂಭವಿಸಿದ್ದು, ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದಾರೆ.

ಟ್ರ್ಯಾಕ್ಟರ್‌ನಲ್ಲಿ ಕಾರ್ಮಿಕರು ಕಬ್ಬು ಕಟಾವಿಗೆಂದು ಇಂಡಿಯಿಂದ ಮಂಡ್ಯಕ್ಕೆ ತೆರಳುತ್ತಿದ್ದರು. ಸ್ಪೀಡ್ ಬ್ರೇಕರ್ ಇದ್ದ ಹಿನ್ನೆಲೆ ಚಾಲಕ ಟ್ರ್ಯಾಕ್ಟರ್ ನಿಧಾನವಾಗಿ ಚಲಾಯಿಸಿದ್ದಾನೆ. ಈ ವೇಳೆ ಹಿಂಬದಿಯಿಂದ ವೇಗವಾಗಿ ಬಂದ ಲಾರಿ ಟ್ರ‍್ಯಾಕ್ಟರ್‌ಗೆ ಗುದ್ದಿದೆ. ಲಾರಿ ಗುದ್ದಿದ ಪರಿಣಾಮ ಟ್ರ್ಯಾಕ್ಟರ್‌ನಲ್ಲಿದ್ದ ತಂದೆ-ಮಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನು ಹಾಗೂ ಮೃತರ ದೇಹ ನಿಡಗುಂದಿ ಆಸ್ಪತ್ರೆಗೆ ರವಾನಿಸಲಾಗಿದೆ. ನಿಡಗುಂದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Must Read