ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರತಿ ಟನ್ ಕಬ್ಬಿಗೆ 3,500 ರೂ. ಘೋಷಿಸುವಂತೆ ಆಗ್ರಹಿಸಿ ಕಬ್ಬು ಬೆಳೆಗಾರರು ನಡೆಸಿರುವ ಹೋರಾಟ ಮತ್ತಷ್ಟು ತೀವ್ರ ಸ್ವರೂಪಕ್ಕೆ ತಿರುಗಿದೆ. ಜಿಲ್ಲೆಯ ಮುಧೋಳ ತಾಲೂಕಿನ ಸೈದಾಪುರ ಗ್ರಾಮದ ಸಮೀರವಾಡಿಯ ಗೋದಾವರಿ ಕಾರ್ಖಾನೆ ಬಳಿ ಸಾಲಾಗಿ ನಿಲ್ಲಿಸಿದ್ದ 100ಕ್ಕೂ ಹೆಚ್ಚು ಟ್ರ್ಯಾಕ್ಟರ್ ಟ್ರಾಲಿಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈಡಿಗ ಈ ಕುರಿತಂತೆ ಬೆಳಗಾವಿಯ ಜಿಲ್ಲಾ ಉಸ್ತುವಾರಿ ಸಚಿವ ತಿಮ್ಮಾಪುರ ಅವರಿಗೆ ದೂರವಾಣಿ ಕರೆ ಮಾಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಘಟನೆಯ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು. ಜೊತೆಗೆ ಅಧಿಕಾರಿಗಳೊಂದಿಗೂ ಮಾತನಾಡಿ ತನಿಖೆಗೆ ಆದೇಶಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಅವರು, ರೈತರು ತಮ್ಮ ಟ್ರ್ಯಾಕ್ಟರ್ ಗಳನ್ನೇ ಸುಡ್ತಾರಾ? ಸರ್ಕಾರ ಏನ್ಮಾಡಬೇಕು ಎಲ್ಲ ಮಾಡಿದೆ. ಯಾರದ್ದೋ ಮನಸ್ಸಿನಲ್ಲಿ ಅಸೂಯೆ ಇರಬೇಕು. ರೈತರಾದವರು ಯಾರೂ ಕೂಡ ಈ ರೀತಿ ಮಾಡುವುದಿಲ್ಲ. ಇತಿಹಾಸದಲ್ಲೇ ಯಾವ ಸರ್ಕಾರ ಕೊಡದ ದರ ನಾವು ಕೊಟ್ಟಿದ್ದೇವೆ. ರಾಜ್ಯದಲ್ಲಿ ಇಡೀ ರೈತ ಸಂಕುಲ ತುಂಬಾ ಸಂತೋಷದಿಂದ ಇದೆ ಎಂದರು.

