ತೆಲಂಗಾಣದ ಸೂರ್ಯಪೇಟ್ ನಲ್ಲಿ ಟ್ರ್ಯಾಕ್ಟರ್ – ಲಾರಿ ಡಿಕ್ಕಿ: 5 ಮಂದಿ ಸಾವು, 20 ಮಂದಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ತೆಲಂಗಾಣದ ಸೂರ್ಯಪೇಟ್‌ನಲ್ಲಿ ಭಾನುವಾರ ಮುಂಜಾನೆ ಮುನಗಲಾ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ಟ್ರ್ಯಾಕ್ಟರ್‌ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮಗು ಸೇರಿದಂತೆ ಐವರು ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡಿದ್ದಾರೆ.

ಮೃತರು ಮುನಗಲ್ ಹೊರವಲಯದಲ್ಲಿರುವ ಅಯ್ಯಪ್ಪ ದೇವಸ್ಥಾನದಲ್ಲಿ ಪೂಜೆ ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ರಸ್ತೆ ಅಪಘಾತದಲ್ಲಿ ತೆನ್ನೇರು ಪ್ರಮೀಳಾ (35), ಚಿಂತಕಾಯಲ ಪ್ರಮೀಳಾ (33), ಉದಯ ಲೋಕೇಶ್ (8), ನರಗೋಣಿ ಕೋಟಯ್ಯ (55) ಮತ್ತು ಗುಂಡು ಜ್ಯೋತಿ (38) ಮೃತಪಟ್ಟಿದ್ದಾರೆ.

ಟ್ರ್ಯಾಕ್ಟರ್‌ನಲ್ಲಿ ಕನಿಷ್ಠ 30 ಜನರು ಪ್ರಯಾಣಿಸುತ್ತಿದ್ದಾಗ ವಾಹನವು ತಪ್ಪು ಮಾರ್ಗದಲ್ಲಿ ಚಲಿಸಿ ಹೈದರಾಬಾದ್-ವಿಜಯವಾಡ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶಿಸಿತು. ಅದೇ ವೇಳೆ ವೇಗವಾಗಿ ವಿಜಯವಾಡ ಕಡೆಗೆ ಹೋಗುತ್ತಿದ್ದ ಲಾರಿ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಟ್ರ್ಯಾಕ್ಟರ್‌ನಲ್ಲಿದ್ದ 30 ಮಂದಿ ವಾಹನದಿಂದ ರಸ್ತೆಗೆ ಬಿದ್ದಿದ್ದಾರೆ. ವೇಗವಾಗಿ ಬಂದ ಲಾರಿ ಟ್ರಾಕ್ಟರ್ ಅನ್ನು ಹಲವಾರು ಮೀಟರ್‌ಗಳವರೆಗೆ ಎಳೆದುಕೊಂಡು ಬಂದಿದೆ.

ಮಾಹಿತಿ ಪಡೆದ ಪೊಲೀಸರು ಹಾಗೂ ಸ್ಥಳೀಯರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ.

ಮಧ್ಯರಾತ್ರಿ ಅಪಘಾತ ಸಂಭವಿಸಿದ್ದು, ಟ್ರ್ಯಾಕ್ಟರ್‌ನಲ್ಲಿ 30 ಮಂದಿ ಪ್ರಯಾಣಿಸುತ್ತಿದ್ದರು ಎಂದು ಮುನಗಲ್ ವೃತ್ತ ನಿರೀಕ್ಷಕ ಆಂಜನೇಯುಲು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!