ಹೊಸದಿಗಂತ ಚಿತ್ರದುರ್ಗ
ಚಾಲಕನ ನಿಯಂತ್ರಣ ತಪ್ಪಿ ಟ್ರಾಕ್ಟರ್ ಪಲ್ಟಿಯಾದ ಪರಿಣಾಮ 15 ಜನರು ಗಾಯಗೊಂಡಿರುವ ಘಟನೆ ನಾಯಕನಹಟ್ಟಿ ಬಳಿಯ ಜಾಗನಾರಹಟ್ಟಿ ಗ್ರಾಮದ ಬಳಿಯ ಹಳ್ಳದಲ್ಲಿ ಭಾನುವಾರ ಸಂಜೆ ನಡೆದಿದೆ.
ಗಾಯಗೊಂಡ 15 ಜನರು ತಿಮ್ಮಪ್ಪಯ್ಯನಹಳ್ಳಿ ಗ್ರಾಮದವರು ಎಂದು ತಿಳಿದುಬಂದಿದೆ.
ಮದುಗೆ ಹೋಗಿ ಗ್ರಾಮಕ್ಕೆ ಮರಳುವಾಗ ಟ್ರಾಕ್ಟರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ನಾಯಕನಹಟ್ಟಿ ಹೋಬಳಿಯ ತಿಮ್ಮಪ್ಪಯ್ಯನಹಳ್ಳಿ ಗ್ರಾಮದಿಂದ ಮಲ್ಲಾಪುರ ಗ್ರಾಮಕ್ಕೆ ಸಂಬಂಧಿಕರ ಮದುವೆಗೆ ಟ್ರಾಕ್ಟರ್ ನಲ್ಲಿ ಹೋಗಿದ್ದರು. ಮದುವೆ ಮುಗಿಸಿಕೊಂಡು ಸಂಜೆ ಸ್ವಗ್ರಾಮಕ್ಕೆ ಹಿಂತಿರುತ್ತಿದ್ದ ಸಂದರ್ಭದಲ್ಲಿ ಅವಘಡ ಸಂಭವಿಸಿದೆ.
ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಗಾಯಾಳುಗಳನ್ನು ನಾಯಕನಹಟ್ಟಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ನಾಯಕಹಟ್ಟಿ ಪೋಲಿಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.