ಹೊಸದಿಗಂತ ವರದಿ,ಕೊಪ್ಪಳ:
ಟ್ರ್ಯಾಕ್ಟರ್ ಮತ್ತು ಟ್ರೇಲರ್ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕೊಪ್ಪಳ ಗ್ರಾಮೀಣ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಿರಣ್ ಹಾಗೂ ರಮೇಶ್ ಬಂಧಿತ ಆರೋಪಿಗಳು. ಆರೋಪಿಗಳು ಇತ್ತೀಚೆಗೆ ದದೇಗಲ್ ಬಳಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಹಾಗೂ ಟ್ರೇಲರ್ ಅನ್ನು ಕಳ್ಳತನ ಮಾಡಿದ್ದರು. ಈ ಸಂಬಂಧ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಆರೋಪಗಳನ್ನು ಬಂಧಿಸಿದ್ದಾರೆ.
ಆರೋಪಿತರಿಂದ 5 ಟ್ರೇಲರ್ ಹಾಗೂ 4 ಟ್ರ್ಯಾಕ್ಟರ್ ಇಂಜಿನ್ ವಶಪಡಿಸಿಕೊಂಡಿದ್ದಾರೆ. ಇವುಗಳ ಮೌಲ್ಯ 24.10 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಗ್ರಾಮೀಣ ಠಾಣಾ ಪೊಲೀಸರ ಕರ್ತವ್ಯಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.