February 17, 2026
Tuesday, February 17, 2026
spot_img

ಹಾವೇರಿಯಲ್ಲಿ ಟ್ರ್ಯಾಕ್ಟರ್ ಟ್ರೈಲರ್-ಟಾಟಾ ಏಸ್ ವಾಹನ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಸ್ತೆಬದಿ ನಿಂತಿದ್ದ ಟ್ರ್ಯಾಕ್ಟರ್ ಟ್ರೈಲರ್ ಗೆ ಟಾಟಾ ಏಸ್ ವಾಹನ ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲಿಯೇ ಮೃತಪಟ್ಟು, 20 ಮಂದಿ ‌ಸಣ್ಣಪುಟ್ಟ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಕಾಕೋಳ ಗ್ರಾಮದ ಬಳಿ‌ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.

ಮೃತಪಟ್ಟವರನ್ನು ಚಮನಸಾಬ್ ಕೆರಿಮತ್ತಿಹಳ್ಳಿ (65 ವರ್ಷ), ಮಾಬುಸಾಬ್ ದೊಡ್ಡಗುಬ್ಬಿ (65 ವರ್ಷ), ನಿಂಗಮ್ಮ ಜಿಗಳೇರ್ (70ವ) ಎಂದು ಗುರುತಿಸಲಾಗಿದೆ. ಮೃತರು ದಾವಣಗೆರೆ ಜಿಲ್ಲೆ ಮಲೇಬೆನ್ನೂರಿನ ನಿವಾಸಿಗಳಾಗಿದ್ದಾರೆ.

ಸದ್ಯ ಸ್ಥಳಕ್ಕೆ ರಾಣೇಬೆನ್ನೂರು ಗ್ರಾಮೀಣ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ಅಂಬ್ಯುಲೆನ್ಸ್ ಮೂಲಕ ಗಾಯಾಳನ್ನು ರಾಣೇಬೆನ್ನೂರು ತಾಲೂಕು ಆಸ್ಪತ್ರೆಗೆ ಸಾಗಿಸಲಾಗಿದೆ. ಕಾರ್ಯಕ್ರಮ ಮುಗಿಸಿಕೊಂಡು ವಾಪಸ್ ಊರಿಗೆ ಹೋಗುತ್ತಿದ್ದ ವೇಳೆ ರಸ್ತೆ ಬದಿ ನಿಂತಿದ್ದ ಟ್ರಾಕ್ಟರ್ ಟ್ರೈಲರ್​​ ಗೆ ಟಾಟಾ ಏಸ್ ಡಿಕ್ಕಿ ಹೊಡೆದಿದೆ. ಟ್ರಾಕ್ಟರ್ ಟ್ರೈಲರ್​ ಹಿಂಬದಿ ಯಾವುದೇ ಲೈಟ್ ಇರುವುದಿಲ್ಲ. ಹೀಗಾಗಿ ಕತ್ತಲಲ್ಲಿ ಕಾಣಿಸಲಿಲ್ಲ. ಪರಿಣಾಮ ವೇಗವಾಗಿ ಬಂದ ಟಾಟಾ ಏಸ್ ರಸ್ತೆ ಬದಿ ನಿಲ್ಲಿಸಲಾಗಿದ್ದ ಟ್ರೈಲರ್ ಗೆ ಗುದ್ದಿದೆ ಎಂದು ತಿಳಿದುಬಂದಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !