ಹೊಸದಿಗಂತ ಡಿಜಿಟಲ್ ಡೆಸ್ಕ್:
ಉದ್ಯಮಿ ಆನಂದ್ ಮಹೀಂದ್ರಾ ಸಾಮಾಜಿಕ ಜಾಲತಾಣಗಳಲ್ಲಿ ತುಂಬಾ ಸಕ್ರಿಯರಾಗಿದ್ದಾರೆ. ಆಸಕ್ತಿದಾಯಕ ವಿಷಯಗಳನ್ನು ಪೋಸ್ಟ್ ಮಾಡುವ ಮೂಲಕ ಎಲ್ಲರೊಂದಿಗೆ ಸಂಪರ್ಕದಲ್ಲಿದ್ದಾರೆ. ಅವರು ಪೋಸ್ಟ್ ಮಾಡಿದ ಇತ್ತೀಚಿನ ಟ್ರ್ಯಾಕ್ಟರ್ ವಿಡಿಯೋ ವೈರಲ್ ಆಗಿದೆ.
ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಹೊಸ ವಾಹನಗಳನ್ನು ಇಷ್ಟಪಡುತ್ತಾರೆ. ಅಂತಹ ವಾಹನಗಳ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳುತ್ತಾರೆ. ಇತ್ತೀಚಿನ ವೀಡಿಯೊ ಅಂತರ್ಜಾಲದಲ್ಲಿ ಸಖತ್ ಸದ್ದು ಮಾಡುತ್ತಿದೆ. ಇದು ನಾವು ನೋಡುವ ಟ್ರ್ಯಾಕ್ಟರ್‌ಗಿಂತ ಹೆಚ್ಚು ಆಸಕ್ತಿದಾಯಕವಾಗಿದೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ʻಇಂಟರೆಸ್ಟಿಂಗ್.. ಆದರೆ ನನಗೊಂದು ಅನುಮಾನ, ಯಾಕೆ?” ಎಂದು ಶೀರ್ಷಿಕೆ ನೀಡಿದ್ದಾರೆ. ವೀಡಿಯೊದಲ್ಲಿ, ವ್ಯಕ್ತಿಯೊಬ್ಬ 7 ಅಡಿ ಎತ್ತರದ ಸೀಟಿನ ಮೇಲೆ ಕುಳಿತು ಟ್ರ್ಯಾಕ್ಟರ್ ಓಡಿಸುತ್ತಿರುವುದನ್ನು ಕಾಣಬಹುದು. ಎತ್ತರದ ಆಸನದ ಸ್ಥಾನಕ್ಕೆ ಅನುಗುಣವಾಗಿ ಸ್ಟೀರಿಂಗ್ ವ್ಯವಸ್ಥೆ ಮಾಡಲಾಗಿದೆ. ಅದರ ತಯಾರಿಕೆಯ ಕೌಶಲ್ಯವು ಗೋಚರಿಸುತ್ತದೆ, ಆದರೆ ಇದನ್ನು ಏಕೆ ಈ ರೀತಿಯಲ್ಲಿ ತಯಾರಿಸಲಾಗುತ್ತದೆ ಎಂಬುದು ಅರ್ಥವಾಗುತ್ತಿಲ್ಲ. ಆನಂದ್ ಮಹೀಂದ್ರ ಕೂಡ ತಮ್ಮ ಪೋಸ್ಟ್‌ನಲ್ಲಿ ಅದೇ ಪ್ರಶ್ನೆಯನ್ನು ಕೇಳಿದ್ದಾರೆ.
Interesting. But I have only one question: WHY? pic.twitter.com/Iee9NZC48E
— anand mahindra (@anandmahindra) November 17, 2023