ಹೊಸದಿಗಂತ ಡಿಜಿಟಲ್ ಡೆಸ್ಕ್:
13 ಜನರಿದ್ದ ಟ್ರ್ಯಾಕ್ಟರ್ ಎಡೆಬಿಡದೆ ಸುರಿಯುತ್ತಿರುವ ಮಳೆಯ ನಡುವೆ ಉಕ್ಕಿ ಹರಿಯುತ್ತಿದ್ದ ಘಟಪ್ರಭಾ ನದಿಗೆ ಬಿದ್ದ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಕಳೆದ ಮೂರು ದಿನಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದ್ದು, ಅಣೆಕಟ್ಟೆ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಮೂಡಲಗಿ ತಾಲೂಕಿನ ಅವರಾದಿ ಗ್ರಾಮದ ನಂದಗಾಂವ್ ಬಳಿಯ ಮಧ್ಯೆ ಇರುವ ಬ್ರಿಡ್ಜ್ ಕಮ್ ಬ್ಯಾರೇಜ್ ಮುಳುಗಡೆಯಾಗಿದೆ. ನದಿ ದಾಟುತ್ತಿದ್ದಾಗ 13 ಜನರನ್ನು ಹೊತ್ತೊಯ್ಯುತ್ತಿದ್ದ ಸೆಮಿ ಟ್ರಾಕ್ಟರ್ ನೀರಿಗೆ ಬಿದ್ದಿದೆ.
ಅದೃಷ್ಟವಶಾತ್ ಹನ್ನೆರಡು ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ನಾಪತ್ತೆಯಾದವರಿಗಾಗಿ ಶೋಧ ನಡೆಸುತ್ತಿದ್ದಾರೆ. ಕುಲಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.