Thursday, September 4, 2025

ಅಮೆರಿಕ-ಜಪಾನ್ ನಡುವೆ ವ್ಯಾಪಾರ ಒಪ್ಪಂದ.. ಜಪಾನ್‌ ಮೇಲಿನ ಟ್ಯಾರಿಫ್‌ 10% ಇಳಿಸಿದ ಟ್ರಂಪ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಪಾನ್ ಜೊತೆ ಬೃಹತ್‌ ವ್ಯಾಪಾರ ಒಪ್ಪಂದವನ್ನು ಮಾಡಿಕೊಂಡಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ.

ಘೋಷಿಸಲಾದ ಒಪ್ಪಂದದ ಪ್ರಕಾರ, ಅಮೆರಿಕವು ಜಪಾನಿನ ರಫ್ತಿನ ಮೇಲೆ ಶೇ.15 ರಷ್ಟು ಸುಂಕವನ್ನು ವಿಧಿಸಿದೆ. ಜಪಾನ್, ಅಮೆರಿಕದಲ್ಲಿ 550 ಬಿಲಿಯನ್ ಡಾಲರ್ ಹೂಡಿಕೆ ಮಾಡುತ್ತದೆ ಎಂದು ಟ್ರಂಪ್ ತಿಳಿಸಿದ್ದಾರೆ.

ನನ್ನ ನಿರ್ದೇಶನದ ಮೇರೆಗೆ ಜಪಾನ್ ಅಮೆರಿಕದಲ್ಲಿ 550 ಬಿಲಿಯನ್ ಡಾಲರ್‌ಗಳನ್ನು ಹೂಡಿಕೆ ಮಾಡುತ್ತದೆ. ಜಪಾನ್ ಅಮೆರಿಕದ ಕಾರುಗಳು, ಅಕ್ಕಿ ಮತ್ತು ಕೆಲವು ಕೃಷಿ ಉತ್ಪನ್ನಗಳ ರಫ್ತಿಗೆ ಸಹ ಮುಕ್ತವಾಗಲಿದೆ. ಈ ಒಪ್ಪಂದವು ಲಕ್ಷಾಂತರ ಉದ್ಯೋಗಗಳನ್ನು ಸೃಷ್ಟಿಸುತ್ತದೆ ಎಂದು ಟ್ರಂಪ್‌ ತಿಳಿಸಿದ್ದಾರೆ.

ಇದನ್ನೂ ಓದಿ