ಹೊಸದಿಗಂತ ಡಿಜಿಟಲ್ ಡೆಸ್ಕ್ :
ಸಿಲಿಕಾನ್ ಸಿಟಿಯಲ್ಲಿ ಕೆಎಸ್ಆರ್ಟಿಸಿ (KSRTC), ಬಿಎಂಟಿಸಿ (BMTC) ವ್ಯಾಪ್ತಿಯಲ್ಲಿ ಬಸ್ಸುಗಳ ಕಾರ್ಯಾಚರಣೆ ಮಂಗಳವಾರ ಇರುತ್ತಾ ಇಲ್ಲವೇ ಎಂಬ ಗೊಂದಲಗಳಿಗೆ ಇದೀಗ ಉತ್ತರ ಸಿಕ್ಕಿದ್ದು, ನಾಳೆ ಯಾವುದೇ ರೀತಿಯ ವ್ಯತ್ಯಯ ಇಲ್ಲ ಎಂದು ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆಗೆ (Transport Strike) ಮುಂದಾಗುತ್ತಿರುವ ಹಿನ್ನೆಲೆಯಲ್ಲಿ ವ್ಯತ್ಯಯ ಉಂಟಾಗಬಹುದು ಎಂಬ ಸುದ್ದಿ ಬೆನ್ನಲ್ಲೇ ಈಗ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
4 ಬೇಡಿಕೆಗಳನ್ನು ಮುಂದಿಟ್ಟು ಕರೆ ನೀಡಿರುವ ಸಾರಿಗೆ ನೌಕರರ ಪ್ರತಿಭಟನೆಗೆ ನೂರಾರು ಸಂಖ್ಯೆಯಲ್ಲಿ ನೌಕರರು ಭಾಗಿಯಾಗುವ ಸಾಧ್ಯತೆ ಇದ್ದು, ಬಸ್ ವ್ಯತ್ಯಯದ ಆತಂಕ ಎದುರಾಗಿತ್ತು. ಈ ನಿಟ್ಟಿನಲ್ಲಿ ಎರಡು ನಿಗಮಗಳು ಮಾಹಿತಿ ನೀಡಿವೆ.
ಬೆಳಗ್ಗೆ 11 ಗಂಟೆಯಿಂದ ಸಂಜೆ 5.30 ರವರೆಗೆ ನಾಲ್ಕು ರಸ್ತೆ ಸಾರಿಗೆ ಸಂಸ್ಥೆಗಳ ವ್ಯಾಪ್ತಿಯ ವಿಭಾಗೀಯ ಕಚೇರಿಗಳ ಮುಂದೆ ಧರಣಿ ಸತ್ಯಾಗ್ರಹ ನಡೆಸಲು ಕರೆ ನೀಡಿರುವುದು ಸರಿಯಷ್ಟೇ.ಆದರೆ ಈ ಸಂಬಂಧ ಕೆಎಸ್ಆರ್ಟಿಸಿ ವ್ಯಾಪ್ತಿಯ ಬಸ್ಸುಗಳ ಕಾರ್ಯಾಚರಣೆಯಲ್ಲಿ ಯಾವುದೇ ರೀತಿಯ ವ್ಯತ್ಯಯವಾಗುವುದಿಲ್ಲ. ಬಸ್ಸುಗಳ ಕಾರ್ಯಚರಣೆಯು ಯಥಾಸ್ಥಿತಿಯಲ್ಲಿ ಇರಲಿದೆ.