ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ಮಾರ್ಟ್‌ಫೋನ್‌ಗಳು, ಲ್ಯಾಪ್‌ಟಾಪ್‌ಗಳು ಮತ್ತು ಇತರ ತಾಂತ್ರಿಕ ಉತ್ಪನ್ನಗಳಿಗೆ ಹೊಸದಾಗಿ ವಿಧಿಸಲಾದ ಸುಂಕಗಳಿಗೆ ವಿನಾಯಿತಿ ನೀಡುವುದಾಗಿ ಘೋಷಿಸಿದ್ದಾರೆ.
ಚೀನಾದ ಸರಕುಗಳ ಮೇಲೆ ಶೇ.145 ರಷ್ಟು ಸುಂಕ ಮತ್ತು ಇತರ ದೇಶಗಳ ಉತ್ಪನ್ನಗಳ ಮೇಲೆ ಶೇ.10 ರಷ್ಟು ಮೂಲ ಸುಂಕ ವಿಧಿಸುವ ಟ್ರಂಪ್ ನಿರ್ಧಾರವನ್ನು ಅನುಸರಿಸಿ ಈ ಕ್ರಮ ಕೈಗೊಳ್ಳಲಾಗಿದೆ.
ಈ ನಿರ್ಧಾರ ಚೀನಾದಲ್ಲಿ ಐಫೋನ್‌ಗಳು ಮತ್ತು ಇತರ ಉತ್ಪನ್ನಗಳನ್ನು ತಯಾರಿಸುವ ಆಪಲ್‌ನಂತಹ ತಂತ್ರಜ್ಞಾನ ದೈತ್ಯರ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರಬಹುದು ಎನ್ನಲಾಗಿದೆ.