ಸಿದ್ದರಾಮಯ್ಯ ನಿವಾಸದ ಬಳಿ ʻಗಾನ ಬಜಾನಾʼ: ಬೆಂಬಲಿಗರಿಂದ ವಾದ್ಯ ಕಚೇರಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಸಿಎಂ ಆಗಿ ಸಿದ್ದರಾಮಯ್ಯ ಪದಗ್ರಹಣ ಮಾಡುತ್ತಿರುವುದರಿಂದ ಅಭಿಮಾನಿಗಳಲ್ಲಿ ಎಲ್ಲಿಲ್ಲದ ಸಂತೋಷ ಮನೆ ಮಾಡಿದೆ. ಬೆಳ್ಳಂಬೆಳಗ್ಗೆಯೇ ಅಭಿಮಾನಿಗಳು ತಮ್ಮದೇ ಆದ ರೀತಿಯಲ್ಲಿ ಪ್ರೀತಿಯನ್ನು ವ್ಯಕ್ತಪಡಿಸುತ್ತಿದ್ದಾರೆ. ಬೆಂಗಳೂರಿನಲ್ಲಿರುವ ಸಿದ್ದರಾಮಯ್ಯ ಅವರ ನಿವಾಸದ ಹೊರಗೆ ಬೆಂಬಲಿಗರಿಂದ ಸಾಂಪ್ರದಾಯಿಕ ಸಂಗೀತ ವಾದ್ಯಗಳನ್ನು ನುಡಿಸಲಾಗುತ್ತಿದೆ.

ಪ್ರಮಾಣ ವಚನ ಸಮಾರಂಭಕ್ಕೂ ಮುನ್ನ ಅವರ ಬೆಂಬಲಿಗರು ಬೆಂಗಳೂರಿನಲ್ಲಿರುವ ಅವರ ನಿವಾಸದ ಹೊರಗೆ ಹಾಡುಗಳನ್ನು ಹಾಡಿ,  ಸಿಹಿ ಹಂಚಿ ಸಂಭ್ರಮಿಸಿದರು. ಅಪಾರ ಸಂಖ್ಯೆಯ ಬೆಂಬಲಿಗರು ಸಿದ್ದರಾಮಯ್ಯ ನಿವಾಸದ ಹೊರಗೆ ಜಮಾಯಿಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!