ಹೊಸದಿಗಂತ ಡಿಜಿಟಲ್ ಡೆಸ್ಕ್:
ಜುಲೈ 05 ಶನಿವಾರದಂದು ಬೆಂಗಳೂರಿನ ಹೃದಯ ಭಾಗದಲ್ಲಿರುವ ಕಂಠೀರವ ಸ್ಟೇಡಿಯಂನಲ್ಲಿ ಜಾವಲಿನ್ ಥ್ರೋ ಸ್ಪರ್ಧೆ, ನೀರಜ್ ಚೋಪ್ರಾ ಕ್ಲಾಸಿಕ್-2025 ಕಾರ್ಯಕ್ರಮ ನಡೆಯಲಿರುವ ಕಾರಣ ಬೆಂಗಳೂರಿನ ಟ್ರಾಫಿಕ್ ಪೊಲೀಸರು ಸಾರ್ವಜನಿಕರಿಗೆ ಟ್ರಾಫಿಕ್ ಸಲಹೆಯನ್ನು ಬಿಡುಗಡೆ ಮಾಡಿದ್ದಾರೆ.
ಕಂಠೀರವ ಸ್ಟೇಡಿಯಂನಲ್ಲಿ ನಾಳೆ ನೀರಜ್ ಚೋಪ್ರಾ ಕ್ಲಾಸಿಕ್-2025 ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಸುಮಾರು 16 ಸಾವಿರ ಜನ ಭಾಗವಹಿಸುವ ಸಾಧ್ಯತೆ ಇದೆ. ವಿಶ್ವ ನಂಬರ್ ಒನ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಸೇರಿದಂತೆ ಅಂತರರಾಷ್ಟ್ರೀಯ ಜಾವಲಿನ್ ಥ್ರೋ ಆಟಗಾರರು ಭಾಗಿಯಾಗಲಿದ್ದಾರೆ.
ಕಾರ್ಯಕ್ರಮ ಹಿನ್ನೆಲೆ ಸ್ಟೇಡಿಯಂ ಸುತ್ತ ಸಂಚಾರ ಮಾರ್ಪಾಡು ಮಾಡಲಾಗಿದೆ. ಸಂಜೆ 4ರಿಂದ ರಾತ್ರಿ 10ರ ತನಕ ಸಂಚಾರ ಮಾರ್ಪಾಡು ಮಾಡಿದ್ದು, ಈ ವೇಳೆ ಸ್ಟೇಡಿಯಂ ಸುತ್ತ ರಸ್ತೆಯಲ್ಲಿ ಗೂಡ್ಸ್ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಕೆಬಿ ರಸ್ತೆ, ವಿಠಲ್ ಮಲ್ಯ ರಸ್ತೆ, ಆರ್‌ಆರ್‌ಎಮ್ ಆರ್ ರಸ್ತೆ, ಕೆಜಿ ರಸ್ತೆ, ದೇವಾಂಗ ರಸ್ತೆ, ಎನ್.ಆರ್.ರಸ್ತೆ, ನೃಪತುಂಗ ರಸ್ತೆ, ಶೇಷಾದ್ರಿ ರಸ್ತೆ, ಅಂಬೇಡ್ಕರ್ ರಸ್ತೆಯಲ್ಲಿ ಪಾರ್ಕಿಂಗ್ ನಿಷೇಧ ಮಾಡಲಾಗಿದೆ.