ಬೆಂಗಳೂರಿನ ಈ ರಸ್ತೆಯಲ್ಲಿ ಮೂರು ತಿಂಗಳು ವಾಹನ ಸಂಚಾರ ನಿಷೇಧ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರೈಲ್ವೆ ಇಲಾಖೆ ವತಿಯಿಂದ ಕೆಆ‌ರ್​​ ಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಬೆನ್ನಿಗಾನಹಳ್ಳಿಯಿಂದ ಕಸ್ತೂರಿನಗರ ಕಡೆ ಹೋಗುವ ರೈಲ್ವೆ ಪ್ಯಾರಲಲ್ ರಸ್ತೆಯಲ್ಲಿ ಬ್ರಿಡ್ಜ್ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗುತ್ತಿದೆ.

ಈ ನಿಟ್ಟಿನಲ್ಲಿ ಇಂದಿನಿಂದ (ಜೂನ್​ 14ರಿಂದ) ಮೂರು ತಿಂಗಳು (90 ದಿನಗಳ) ಸಂಚಾರ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ. ಸಾರ್ವಜನಿಕರ ಮತ್ತು ವಾಹನ ಸವಾರರ ಹಿತದೃಷ್ಟಿಯಿಂದ ಸಂಚಾರ ಮಾರ್ಪಾಡು ಮಾಡಲಾಗಿದೆ ಎಂದು ಸಂಚಾರ ಪೂರ್ವ ವಿಭಾಗದ ಉಪ ಪೊಲೀಸ್​ ಆಯುಕ್ತ​ ಸಾಹಿಲ್​​ ಬಾಗ್ಲಾ ತಿಳಿಸಿದ್ದಾರೆ.

ಬೆನ್ನಿಗಾನಹಳ್ಳಿ (ಸದಾನಂದನಗರ ಬ್ರಿಡ್ಜ್) ಕಡೆಯಿಂದ ಹಳೆ ಮದ್ರಾಸ್ ರಸ್ತೆಗೆ ಸೇರುವ ಕೋಕೊ ಕೋಲಾ ಗೋಡಾನ್ ರಸ್ತೆಯಲ್ಲಿ ಸಂಚರಿಸುವ ಎಲ್ಲಾ ರೀತಿಯ ವಾಹನಗಳ ಸಂಚಾರನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!