ಯುಗಾದಿ, ರಂಜಾನ್‌ ಹಿನ್ನೆಲೆ ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ, ಈ ರಸ್ತೆಯಲ್ಲಿ ಓಡಾಡ್ಬೇಡಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಯುಗಾದಿ ಮತ್ತು ರಂಜಾನ್ ಹಬ್ಬ ಹಿನ್ನೆಲೆ ಸಂಚಾರ ದಟ್ಟಣೆ ಉಂಟಾಗಲಿದೆ. ಹಾಗಾಗಿ ವಾಹನ ಸವಾರರು ಸಹಕರಿಸುವಂತೆ ಬೆಂಗಳೂರು ಟ್ರಾಫಿಕ್ ಪೊಲೀಸ್​ ಮನವಿ ಮಾಡಿದ್ದಾರೆ.

ಯುಗಾದಿ ಮತ್ತು ರಂಜಾನ್ ಹಬ್ಬದ ಪ್ರಯುಕ್ತ ಸರ್ಕಾರಿ ರಜೆ ಇದ್ದು, ಕೆಎಸ್​​ಆರ್​ಟಿಸಿ ಸಂಸ್ಥೆ ವತಿಯಿಂದ ಹೆಚ್ಚುವರಿ ಬಸ್ ಬಿಟ್ಟಿರುವ ಹಿನ್ನೆಲೆ ಪ್ರಯಾಣಿಕರು ಈ ದಿನ ಮೆಜೆಸ್ಟಿಕ್ ಬಸ್ ನಿಲ್ದಾಣದಿಂದ ಊರುಗಳಿಗೆ ತೆಳುತ್ತಾರೆ. ಹಾಗಾಗಿ ಮೆಜೆಸ್ಟಿಕ್ ಸುತ್ತಮುತ್ತ ಸಂಚಾರ ದಟ್ಟಣೆಯಾಗುವ ಕಾರಣ ಸಾರ್ವಜನಿಕರು ಬದಲಿ ರಸ್ತೆ ಮೂಲಕ ತೆರಳುವಂತೆ ಸೂಚಿಸಲಾಗಿದೆ.

ಪೈಪ್‌ಲೈನ್ ಹಾನಿಯಿಂದಾಗಿ ಯಲಹಂಕದಿಂದ ಬಾಗಲೂರು ಕಡೆಗೆ ಹೋಗುವ ರಸ್ತೆಯಲ್ಲಿ ವಾಹನ ಸಂಚಾರ ನಿಧಾನವಾಗಿದೆ. ಮಾರತಹಳ್ಳಿ ಪೊಲೀಸ್ ಠಾಣೆಯ ಎದುರಿನ ಓಆರ್​ಆರ್​ (ಹೊರ ವರ್ತುಲ ರಸ್ತೆ) ಯಲ್ಲಿ ಮೆಟ್ರೋ ಕಾಮಗಾರಿ ನಡೆಯುತ್ತಿರುವುದರಿಂದ, ಕಾಡುಬೀಸನಹಳ್ಳಿಯಿಂದ ಕಾರ್ತಿಕನಗರ ಕಡೆಗೆ ಸಂಚಾರ ತುಂಬಾ ನಿಧಾನವಾಗಿದೆ ಎಂದು ಸಂಚಾರಿ ಪೊಲೀಸರು ತಿಳಿಸಿದ್ದಾರೆ.

ಸಕ್ರಾ ಆಸ್ಪತ್ರೆ ರಸ್ತೆಯಲ್ಲಿ ಬಿಡ್ಬ್ಲೂಎಸ್‌ಎಸ್‌ಬಿ ಮತ್ತು ಬಿಬಿಎಂಪಿ ಕಾಮಗಾರಿ ನಡೆಯುತ್ತಿರುವುದರಿಂದ, ಬೆಳ್ಳಂದೂರು ಕೋಡಿಯಿಂದ ಸಕ್ರಾ ಆಸ್ಪತ್ರೆ ಕಡೆಗೆ ವಾಹನ ಸಂಚಾರ ತುಂಬಾ ನಿಧಾನವಾಗಿರಲಿದ್ದು, ವಾಹನ ಸವಾರರು ಅದಕ್ಕೆ ತಕ್ಕಂತೆ ಕೆಲಸಕಾರ್ಯಗಳನ್ನು ಯೋಜಿಸುವಂತೆ ಸೂಚಿಸಲಾಗಿದೆ.

ಇನ್ನು ಅದೇ ರೀತಿಯಾಗಿ ನಾಗವಾರ ಜಂಕ್ಷನ್​ನಿಂದ ಹೆಣ್ಣೂರು ಜಂಕ್ಷನ್ ಕಡೆಗೆ ಮೆಟ್ರೋ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ಸಂಚಾರ ನಿಧಾನಗತಿಯಲ್ಲಿರಲಿದೆ. ಬೆಸ್ಕಾಂ ಕಾಮಗಾರಿಯಿಂದಾಗಿ ಜಯಂತಿ ಗ್ರಾಮದಿಂದ ರಾಘವೇಂದ್ರ ವೃತ್ತದ ಕಡೆಗೆ ಸಾಗುವ ರಸ್ತೆಯಲ್ಲಿ ನಿಧಾನಗತಿಯ ಸಂಚಾರವಿರುತ್ತದೆ ಸಂಚಾರಿ ಪೊಲೀಸರು ಕೋರಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!