ಹೊಸದಿಗಂತ ಡಿಜಿಟಲ್ ಡೆಸ್ಕ್ :
ನಿರ್ದೇಶಕ ಕಿರಣ್ ಗೋವಿ (Director Kiran Govi) ಅವರು ಹೃದಯಾಘಾತದಿಂದ (Heart Attack) ನಿಧನ ಹೊಂದಿದ್ದಾರೆ.
ಪಯಣ (Payana), ಸಂಚಾರಿ, ಯಾರಿಗುಂಟು ಯಾರಿಗಿಲ್ಲ, ಸಿನಿಮಾಗಳಿಗೆ ನಿರ್ದೇಶನ (Direction) ಮಾಡುವ ಮೂಲಕ ಗಮನ ಸೆಳೆದಿದ್ದ ಕಿರಣ್ ಗೋವಿ ಅವರಿಗೆ ಹೃದಯಾಘಾತವುಂಟಾಗಿತ್ತು. ತಕ್ಷಣವೇ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಯಿತು. ಚಿಕಿತ್ಸೆ ಸ್ಪಂದಿಸದೇ ಅವರು ನಿಧನರಾಗಿದ್ದಾರೆ.
ಯುವ ನಿರ್ದೇಶಕನ ನಿಧನಕ್ಕೆ ಚಿತ್ರರಂಗದ ಗಣ್ಯರು, ಆಪ್ತರು, ಸಂತಾಪ ಸೂಚಿಸಿದ್ದಾರೆ.