ಹೊಸದಿಗಂತ ಡಿಜಿಟಲ್ ಡೆಸ್ಕ್:
ನಮ್ಮ ಮೆಟ್ರೋ ಹಳದಿ ಮಾರ್ಗದ ರೈಲಿನಲ್ಲಿ ಇಂದು ಬುಧವಾರ ತಾಂತ್ರಿಕ ತೊಂದರೆ ಉಂಟಾಗಿದ್ದು, ಪರಿಣಾಮವಾಗಿ ಈ ಮಾರ್ಗದಲ್ಲಿ ಸಂಚಾರ ಕೆಲ ಕಾಲ ವ್ಯತ್ಯಯವುಂಟಾಗಿ ನಂತರ ಸರಿಯಾಯಿತು ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.
ಇಂದು ಬೆಳಗ್ಗೆ ಕಚೇರಿ, ಕೆಲಸ ಕಾರ್ಯಗಳಿಗೆ ಜನರು ತೆರಳುವ ಸಮಯದಲ್ಲಿ ಹೀಗೆ ಆಗಿದೆ. ಪ್ರಯಾಣಿಕರಿಗೆ ಉಂಟಾದ ಅನನುಕೂಲತೆಗಾಗಿ ವಿಷಾದಿಸುತ್ತೇವೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.
ಹಳದಿ ಮಾರ್ಗದ ಒಂದು ರೈಲಿನಲ್ಲಿ ತಾಂತ್ರಿಕ ತೊಂದರೆ ಉಂಟಾದ ಕಾರಣ, ರೈಲು ಸಂಚಾರದಲ್ಲಿ ವಿಳಂಬ ಉಂಟಾಯಿತು. ನಮ್ಮ ಮೆಟ್ರೋ ಪ್ರಯಾಣಿಕರ ಮಾಹಿತಿಗಾಗಿ ತಿಳಿಸಲಾಗಿದೆ. ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗಾಗಿ ವಿಷಾದಿಸುತ್ತೇವೆ ಎಂದು ನಮ್ಮ ಮೆಟ್ರೋ ಅಧಿಕೃತ ಎಕ್ಸ್ ಹ್ಯಾಂಡಲ್ನಲ್ಲಿ ಪೋಸ್ಟ್ ಮಾಡಿದೆ.
ತಾಂತ್ರಿಕ ಸಮಸ್ಯೆಯನ್ನು 8:47 ಗಂಟೆಗೆ ಸರಿಪಡಿಸಲಾಯಿತು. ಹಳದಿ ಮಾರ್ಗದಲ್ಲಿರುವ ಎಲ್ಲಾ ರೈಲುಗಳು ಈಗ ಸೇವೆಯಲ್ಲಿವೆಯ.ವೇಳಾಪಟ್ಟಿಯ ಪ್ರಕಾರ ಓಡುತ್ತವೆ. ನಮ್ಮ ಮೆಟ್ರೋ ಪ್ರಯಾಣಿಕರ ಮಾಹಿತಿಗಾಗಿ ಎಂದು ತಿಳಿಸಿದೆ.
ನಮ್ಮ ಮೆಟ್ರೋ ಯೆಲ್ಲೋ ಲೈನ್ನಲ್ಲಿ ಇತ್ತೀಚೆಗಷ್ಟೇ ಐದನೇ ರೈಲು ಸಂಚಾರ ಆರಂಭವಾಗಿ ಪ್ರತಿ 15 ನಿಮಿಷಕ್ಕೆ ಒಂದು ರೈಲು ಸಂಚಾರ ಮಾಡುವಂತೆ ಆಗಿದ್ದು, ಪ್ರಯಾಣಿಕರಿಗೂ ಅನುಕೂಲವಾಗಿತ್ತು.

