ಟ್ರಾಫಿಕ್ ಫೈನ್ ರಿಯಾಯಿತಿ ಮತ್ತೆ ಎರಡು ವಾರ ವಿಸ್ತರಣೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಟ್ರಾಫಿಕ್ ಫೈನ್ ರಿಯಾಯಿತಿ ಮತ್ತೆ ಎರಡು ವಾರ ವಿಸ್ತರಣೆ ಮಾಡಲಾಗಿದೆ. ಈ ನಾಳೆ ಈ ಬಗ್ಗೆ ಅಧಿಕೃತ ತೀರ್ಮಾನ ಕೈಗೊಳ್ಳಲಾಗುವುದು ಎಂದು ನ್ಯಾಯಮೂರ್ತಿ ಬಿ. ವೀರಪ್ಪ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ನ್ಯಾಯಮೂರ್ತಿ ಬಿ. ವೀರಪ್ಪ ಮಾಹಿತಿ ನೀಡಿ, ಟ್ರಾಫಿಕ್ ಫೈನ್ ರಿಯಾಯಿತಿ ವಿಸ್ತರಿಸಬೇಕೆಂದು ಜನಸಾಮಾನ್ಯರಿಂದ ಬೇಡಿಕೆ ಇದೆ. ಸಾರಿಗೆ ಇಲಾಖೆಯಿಂದಲೂ ಈ ಸಂಬಂಧ ಪತ್ರ ಬಂದಿದೆ. ಸಿಜೆ ಪ್ರಸನ್ನ ಬಿ. ವರಾಳೆ ಸಹ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸಿದ್ದಾರೆ. ನಾಳೆ ಈ ಬಗ್ಗೆ ಅಧಿಕೃತವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಸಂಚಾರ ನಿಯಮ ಉಲ್ಲಂಘನೆ ದಂಡ ವಸೂಲಿಗೆ ಶೇಕಡ 50ರಷ್ಟು ರಿಯಾಯಿತಿ ನೀಡಲಾಗಿದ್ದು, ವಾಹನ ಸವಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜನಸಾಮಾನ್ಯರಿಂದ ದಂಡ ರಿಯಾಯಿತಿ ವಿಸ್ತರಿಸಬೇಕೆಂಬ ಬೇಡಿಕೆ ಕೇಳಿ ಬಂದ ಹಿನ್ನೆಲೆಯಲ್ಲಿ ಮತ್ತೆ ಎರಡು ವಾರ ವಿಸ್ತರಿಸಲಾಗುವುದು ಎಂದು ಹೇಳಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!