ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹೆಚ್ಚುತ್ತಿದ್ದು, ಈ ಎಲ್ಲಾ ಬೆಳವಣಿಗೆಯ ನಡುವೆ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 138 ದೇಶೀಯ ಮತ್ತು ಅಂತಾರಾಷ್ಟ್ರೀಯ ವಿಮಾನಗಳು ರದ್ದಾಗಿವೆ.
ವಿಮಾನ ನಿಲ್ದಾಣ ಅಧಿಕಾರಿಗಳ ಪ್ರಕಾರ, ರದ್ದಾದ ವಿಮಾನಗಳಲ್ಲಿ 4 ಅಂತಾರಾಷ್ಟ್ರೀಯ ಆಗಮನಗಳು, 5 ಅಂತಾರಾಷ್ಟ್ರೀಯ ನಿರ್ಗಮನಗಳು, 63 ದೇಶೀಯ ಆಗಮನಗಳು ಮತ್ತು 66 ದೇಶೀಯ ನಿರ್ಗಮನಗಳು ಸೇರಿವೆ.
ಅನಿಶ್ಚಿತ ಪರಿಸ್ಥಿತಿಯ ಕಾರಣ, ದೆಹಲಿ ವಿಮಾನ ನಿಲ್ದಾಣದ ಅಧಿಕಾರಿಗಳು ಪ್ರಯಾಣಿಕರಿಗೆ ಬೇಗ ವಿಮಾನ ನಿಲ್ದಾಣಕ್ಕೆ ಬರುವಂತೆ ಕೇಳಿದ್ದಾರೆ. ಭದ್ರತಾ ತಪಾಸಣೆಗೆ ಹೆಚ್ಚು ಸಮಯವಾಗಬಹುದು ಎಂದು ಸೂಚನೆ ನೀಡಿದ್ದಾರೆ. ಪ್ರಯಾಣಿಕರು ತಮ್ಮ ಮನೆಗಳಿಂದ ಹೊರಡುವ ಮೊದಲು ತಮ್ಮ ವಿಮಾನದ ಸ್ಥಿತಿಯನ್ನು ಪರಿಶೀಲಿಸಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.