ಹೊಸದಿಗಂತ ಡಿಜಿಟಲ್ ಡೆಸ್ಕ್:
ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಬೈಕ್ ಸವಾರನಿಗೆ ನಡು ರಸ್ತೆಯಲ್ಲೇ ಕಪಾಳಮೋಕ್ಷ ಮಾಡಿರುವಂತಹ ಘಟನೆಯೊಂದು ಸಿಲ್ಕ್ ಬೋರ್ಡ್ ಜಂಕ್ಷನ್ನಲ್ಲಿ ನಡೆದಿದೆ.
ಸದ್ಯ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ವೈರಲ್ ಆಗುತ್ತಿದೆ. ದರ್ಪ ತೋರಿದ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವೈರಲ್ ಆದ ವಿಡಿಯೋ ಪ್ರಕಾರ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಮತ್ತು ಸವಾರರ ಮಧ್ಯೆ ಮಾತಿನ ಚಕಮಕಿ ಉಂಟಾಗಿದೆ. ಈ ವೇಳೆ ನೋಡನೋಡುತ್ತಿದ್ದಂತೆ ಪೊಲೀಸ್ ಸಿಬ್ಬಂದಿ ಸವಾರನಿಗೆ ಕಪಾಳಮೋಕ್ಷ ಮಾಡುತ್ತಾರೆ. ಈ ವಿಡಿಯೋವನ್ನು ಸ್ಥಳೀಯರೊಬ್ಬರು ತಮ್ಮ ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ.
ವೈರಲ್ ವಿಡಿಯೋ ಬೆನ್ನಲ್ಲೇ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕಾನೂನು ಎಲ್ಲರಿಗೂ ಒಂದೇ ಆಗಿದ್ದರೆ, ಅವರ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ? ಇದು ಸಂಪೂರ್ಣವಾಗಿ ಅಧಿಕಾರದ ದುರುಪಯೋಗವಾಗಿದೆ. ಈ ಘಟನೆಯು ಪೊಲೀಸ್ ಇಲಾಖೆ ಮೇಲಿನ ಹೊಣೆಗಾರಿಕೆ, ಶಿಸ್ತು ಮತ್ತು ಸಾರ್ವಜನಿಕ ನಂಬಿಕೆಯ ಬಗ್ಗೆ ಗಂಭೀರ ಕಳವಳವನ್ನು ಹುಟ್ಟುಹಾಕುತ್ತದೆ ಎಂದಿದ್ದಾರೆ.
ನಡುರಸ್ತೆಯಲ್ಲೇ ಸವಾರನಿಗೆ ಕಪಾಳಮೋಕ್ಷ ಮಾಡಿದ ಟ್ರಾಫಿಕ್ ಪೊಲೀಸ್
