May 2, 2026
Saturday, May 2, 2026
spot_img

body-worn ಕ್ಯಾಮರಾಗಳನ್ನು ಆಫ್‌ ಮಾಡಿ ಹಣ ವಸೂಲಿ : ಟ್ರಾಫಿಕ್‌ ಪೊಲೀಸರ ಅಮಾನತು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ದೇಹಕ್ಕೆ ಧರಿಸಿದ್ದ ಕ್ಯಾಮರಾಗಳನ್ನು ಆಫ್‌ ಮಾಡಿ ಅನಾವಶ್ಯಕ ಹಣ ವಸೂಲಿ ಮಾಡುತ್ತಿದ್ದ ಆರೋಪದ ಮೇಲೆ ಮೂವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.

ಬೆಂಗಳೂರಿನ ಹೈಗ್ರೌಂಡ್ಸ್ ಸಂಚಾರಿ ಪೊಲಿಸ್ ಠಾಣೆಯ ಮೂವರು ಸಿಬ್ಬಂದಿ ಬಾಡಿ ಕ್ಯಾಮೆರಾ ಆಫ್ ಮಾಡಿಕೊಂಡು ವಿನಾ ಕಾರಣ ಬೈಕ್ ನಿಲ್ಲಿಸಿ ಹಣ ವಸೂಲಿ ಮಾಡಿದ ಆರೋಪ ಕೇಳಿಬಂದಿದ್ದು, ಸಂಬಂಧ ಇದೀಗ ಮೂವರು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.

ಹೈ ಗ್ರೌಂಡ್ ಸಂಚಾರಿ ಪೊಲೀಸ್ ಠಾಣೆಯ ಎಎಸ್ ಐ ಸುರೇಶ್ ,ಕಾನ್ಸ್ ಟೇಬಲ್ ಗಳಾದ ಪ್ರಶಾಂತ್ ಹಾಗೂ ಸಾದಿಕ್ ಅವರನ್ನ ಸಸ್ಪೆಂಡ್ ಮಾಡಿ ಪಶ್ಚಿಮ ವಿಭಾಗ ಸಂಚಾರಿ ಡಿಸಿಪಿ ಅನೂಪ್ ಶೆಟ್ಟಿ ಆದೇಶ ಹೊರಡಿಸಿದ್ದಾರೆ. ಸ್ಮಾರ್ಟ್‌ ಟ್ರಾಫಿಕ್‌ ನಿರ್ವಹಣಾ ವ್ಯವಸ್ಥೆ ಜಾರಿಗೆ ಕಾನೂನು ಸುವ್ಯವಸ್ಥೆ ಹಾಗೂ ಮೇಲ್ವಿಚಾರಣೆ ದೃಷ್ಟಿಯಿಂದ ಕರ್ತವ್ಯನಿರತ ಪೊಲೀಸ್‌ ಸಿಬ್ಬಂದಿ ಬಾಡಿ ಕ್ಯಾಮರಾ ಬಳಸುವುದು ಕಡ್ಡಾಯವಾಗಿದೆ. ಆದರೆ ಈ ಕ್ಯಾಮರಾಗಳನ್ನು ಆಫ್‌ ಮಾಡಿಕೊಂಡು ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !