ವಿಧಾನಸೌಧ, ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಚಾರ ನಿರ್ಬಂಧ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಗುಜರಾತ್​ನ ಅಹಮದಾಬಾದ್​​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮಂಗಳವಾರ ರಾತ್ರಿ ನಡೆದ ಐಪಿಎಲ್ ಫೈನಲ್​ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 6 ರನ್​ಗಳ ರೋಚಕ ಜಯ ಗಳಿಸಿ ಚಾಂಪಿಯನ್ ಆಗಿ ಆರ್​ಸಿಬಿ ತಂಡ ಬೆಂಗಳೂರಿಗೆ ಆಗಮಿಸಿದೆ.

ಆರ್​ಸಿಬಿ ಆಟಗಾರರಿಗೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ ಸಲ್ಲಿಸಲಿದ್ದಾರೆ. ನಂತರ ಸಂಜೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್​ಸಿಬಿ ಆಟಗಾರರಿಗೆ ಸನ್ಮಾನ ಸಮಾರಂಭ ನಡೆಯಲಿದೆ.

ಮಧ್ಯಾಹ್ನ 3 ಗಂಟೆ ನಂತರ ರಾತ್ರಿ 8ರ ವರೆಗೆ ವಿಧಾನಸೌಧ ಮತ್ತು ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತಲಿನ ರಸ್ತೆಗಳನ್ನು ಬಳಸದಂತೆ ಬೆಂಗಳೂರು ಸಂಚಾರ ಪೊಲೀಸರು ಸಲಹೆ ನೀಡಿದ್ದಾರೆ. ವಿಜಯೋತ್ಸವ ಮೆರವಣಿಗೆ ಇರುವುದಿಲ್ಲ. ಸೀಮಿತ ಪಾರ್ಕಿಂಗ್ ಇರುವುದರಿಂದ ಸಾರ್ವಜನಿಕರು ಮೆಟ್ರೋ ಮತ್ತು ಇತರ ಸಾರ್ವಜನಿಕ ಸಾರಿಗೆಯನ್ನು ಬಳಸುವಂತೆ ಸೂಚಿಸಲಾಗಿದೆ ಎಂದು ಬೆಂಗಳೂರು ಟ್ರಾಫಿಕ್ ಪೊಲೀಸರು ಎಕ್ಸ್​ ಸಂದೇಶದಲ್ಲಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!