October 9, 2026
Friday, October 9, 2026
spot_img

ಪುತ್ತೂರಿನಲ್ಲಿ ಸ್ಟಿಕ್ಕರ್ ಅಳವಡಿಸಿ ಸಂಚಾರ ನಿಯಮ ಉಲ್ಲಂಘನೆ: ವಾಹನ ತಡೆದು ದಂಡ ವಿಧಿಸಿದ ಪೊಲೀಸರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಾಹನ ಚಾಲನೆಗೆ ಅಡ್ಡಿಯಾಗುವ ರೀತಿಯಲ್ಲಿ ಗಾಜುಗಳಿಗೆ ಸ್ಟಿಕ್ಕರ್ ಅಳವಡಿಸುವುದು ಹಾಗೂ ವಾಹನದ ನೋಂದಣಿ ಸಂಖ್ಯೆಯನ್ನು ಮರೆಮಾಚುವಂತೆ ಸ್ಟಿಕ್ಕರ್ ಹಾಕಿಕೊಂಡು ಸಂಚರಿಸುತ್ತಿದ್ದ ವಾಹನಗಳ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಸಂಚಾರ ಠಾಣೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಸಂಚಾರ ನಿಯಮ ಉಲ್ಲಂಘಿಸಿ ಸಂಚರಿಸುತ್ತಿದ್ದ ವಾಹನಗಳನ್ನು ತಪಾಸಣೆ ನಡೆಸಿದ ಪೊಲೀಸರು, ನಿಯಮಬಾಹಿರವಾಗಿ ಅಳವಡಿಸಲಾಗಿದ್ದ ಸ್ಟಿಕ್ಕರ್‌ಗಳನ್ನು ಗಮನಿಸಿ ಸಂಬಂಧಪಟ್ಟ ವಾಹನಗಳ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದಾರೆ.

ವಾಹನದ ಗಾಜುಗಳಿಗೆ ಅಳವಡಿಸುವ ಸ್ಟಿಕ್ಕರ್‌ಗಳು ಚಾಲಕರಿಗೆ ರಸ್ತೆ ಹಾಗೂ ಸುತ್ತಮುತ್ತಲಿನ ವಾಹನಗಳ ಗೋಚರತೆಗೆ ಅಡ್ಡಿಯಾಗುವಂತಿರಬಾರದು. ಅದೇ ರೀತಿ ವಾಹನದ ನೋಂದಣಿ ಸಂಖ್ಯೆಯೂ ಸ್ಪಷ್ಟವಾಗಿ ಕಾಣುವಂತಿರಬೇಕು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಹಬ್ಬ, ಉತ್ಸವದ ನೆಪದಲ್ಲಿ ನಿಯಮ ಉಲ್ಲಂಘನೆಗೆ ಅವಕಾಶವಿಲ್ಲ

ಸಾರ್ವಜನಿಕರು ಯಾವುದೇ ಉತ್ಸವ, ಹಬ್ಬ-ಹರಿದಿನ ಅಥವಾ ಇತರೆ ಕಾರ್ಯಕ್ರಮಗಳ ಸಂದರ್ಭದಲ್ಲಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿ ವಾಹನ ಚಲಾಯಿಸಬಾರದು ಎಂದು ಪೊಲೀಸರು ಸೂಚಿಸಿದ್ದಾರೆ. ನಿಯಮಬಾಹಿರ ಸ್ಟಿಕ್ಕರ್ ಅಳವಡಿಕೆ, ನೋಂದಣಿ ಸಂಖ್ಯೆ ಮರೆಮಾಚುವುದು ಸೇರಿದಂತೆ ಸಂಚಾರಕ್ಕೆ ಅಡ್ಡಿಯಾಗುವ ಯಾವುದೇ ರೀತಿಯ ಕ್ರಮ ಕಂಡುಬಂದರೆ, ಸಂಬಂಧಪಟ್ಟವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪುತ್ತೂರು ಸಂಚಾರ ಠಾಣೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

Must Read