ಮಡಿಕೇರಿಯಲ್ಲಿ ಸಂಚಾರ ನಿಯಮ ಉಲ್ಲಂಘನೆ: ಪೊಲೀಸರ ಜೊತೆ ಅನುಚಿತವಾಗಿ ವರ್ತಿಸಿದ ಪ್ರವಾಸಿಗನಿಗೆ ದಂಡ

ಹೊಸದಿಗಂತ ವರದಿ ಮಡಿಕೇರಿ: ಸಂಚಾರ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಮಡಿಕೇರಿ ಟ್ರಾಫಿಕ್ ಪೊಲೀಸರು ಬೈಕ್ ಸವಾರರ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದಾರೆ. ಬಾಡಿಗೆ ದ್ವಿಚಕ್ರವನ್ನು ಪಡೆದು ಏಕಮುಖ ಮಾರ್ಗದಲ್ಲಿ ವಾಹನ ಚಲಾಯಿಸಿದ್ದೂ ಅಲ್ಲದೆ, ಪೊಲೀಸ್ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿ ನಿಯಮ ಉಲ್ಲಂಘಿಸಿದ ಪ್ರಕರಣದಲ್ಲಿ ಪ್ರವಾಸಿಗನೊಬ್ಬನಿಗೆ ₹10,000 ದಂಡ ವಿಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬೈಕ್ ಸವಾರರನ್ನು ಪೊಲೀಸರು ವಶಕ್ಕೆ ಪಡೆದು ಕಾನೂನು ಕ್ರಮ ಕೈಗೊಂಡಿದ್ದಾರೆ. ನಗರದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ಬೈಕ್‌ಗಳನ್ನು ಅಡ್ಡಾದಿಡ್ಡಿಯಾಗಿ ನಿಲ್ಲಿಸುವುದು, ಸಂಚಾರ ನಿಯಮಗಳನ್ನು ಉಲ್ಲಂಘಿಸುವುದು … Continue reading ಮಡಿಕೇರಿಯಲ್ಲಿ ಸಂಚಾರ ನಿಯಮ ಉಲ್ಲಂಘನೆ: ಪೊಲೀಸರ ಜೊತೆ ಅನುಚಿತವಾಗಿ ವರ್ತಿಸಿದ ಪ್ರವಾಸಿಗನಿಗೆ ದಂಡ